ಬಿಡದೆ ಸುರಿದ ಮಳೆ ಪಡೆದ ಬಿಡುವು
ಬೆಂಗಳೂರು :ಕಳೆದ ಕೆಲವು ದಿನಗಳಿಂದಲೂ ರಾಜ್ಯಾದ್ಯಂತ ಬಿಡುವಿಲ್ಲದೆ ಸುರಿದ ಮಳೆ ಕಳೆದ 24 ಗಂಟೆಗಳ ಅವಧಿಯಲ್ಲಿ ಬಹುತೇಕ ಪೂರ್ಣ ವಿರಾಮವನ್ನೇ ಪಡೆದಿದೆ. ನಿರಂತರವಾಗಿ ಹತ್ತಾರು ಸೆಂಟಿ ಮೀಟರ್ ಮಳೆ ಸುರಿಸಿ ಸುಸ್ತಾಗಿದ್ದ ಮಳೆರಾಯ ವಿಶ್ರಾಂತಿಯಲ್ಲಿದ್ದಾನೆ.
ಮಳೆರಾಯ ವಿರಮಿಸಿದ ಮೇಲೆ ಸೂರ್ಯ ದೇವ ಸುಮ್ಮನಿರಲಾದೀತೆ ? ಮಳೆರಾಯನ ಅನುಪಸ್ಥಿತಿಯಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ ಸೂರ್ಯ ತನ್ನ ಪ್ರತಾಪ ಮೆರೆದಿದ್ದಾನೆ. ತತ್ಪರಿಣಾಮವಾಗಿ ನಾಡಿನ ಅಲ್ಲಲ್ಲಿ ಒಣಹವೆ ಮೂಡಿದೆ. ಹಗಲಿನ ಉಷ್ಣಾಂಶದಲ್ಲಿ ಕೊಂಚ ಏರು ಪೇರಾಗಿದೆ. ಕೆಲವೆಡೆ ದಿನದ ಉಷ್ಣತೆ ಏರಿದೆ.
ಕರಾವಳಿಯ ಕೆಲವೆಡೆ ದಿನದ ಉಷ್ಣಾಂಶ ಸಾಮಾನ್ಯ ಮಟ್ಟಕ್ಕಿಂತಲೂ ಹೆಚ್ಚಾಗಿತ್ತು. ಉತ್ತರ ಒಳನಾಡಿನಲ್ಲೂ ಬದಲಾವಣೆ ಕಂಡುಬಂತು. ರಾಜ್ಯದಲ್ಲಿ ದಿನದ ಗರಿಷ್ಠ ತಾಪಮಾನ ಗುಲ್ಬರ್ಗಾದಲ್ಲಿ ದಾಖಲಾಗಿದೆ. ಅಲ್ಲಿ ಹಗಲಿನ ಉಷ್ಣಾಂಶ 33.4 ಡಿ.ಸೆ. ಇತ್ತು. ಅಂತೆಯೇ ರಾತ್ರಿಯ ಕನಿಷ್ಠ ಉಷ್ಣಾಂಶ ಬೆಳಗಾವಿಯಲ್ಲಿ 18.8 ಡಿ.ಸೆ. ದಾಖಲಾಗಿದೆ.
ಅರಕಲಗೂಡಿನಲ್ಲಿ 3 ಸೆಂಟಿ ಮೀಟರ್ ನಿಪ್ಪಾಣಿ ಹಾಗೂ ಬೈಲ ಹೊಂಗಲಗಳಲ್ಲಿ ತಲಾ 1 ಸೆಂಟಿ ಮೀಟರ್ ಮಾತ್ರ ಮಳೆ ಬಿದ್ದಿದೆ. ಉಳಿದಂತೆ ಬೇರೆಡೆ ಮಳೆಯಾದ ವರದಿಗಳು ಬಂದಿಲ್ಲ.
ಹವಾಮಾನ ಇಲಾಖೆಯ ಮುನ್ಸೂಚನೆಯ ರೀತ್ಯ ಮುಂದಿನ 48 ಗಂಟೆಗಳ ಅವಧಿಯಲ್ಲಿ ಹೆಚ್ಚಿನ ಬದಲಾವಣೆಗಳೇನೂ ಕಂಡು ಬರುವುದಿಲ್ಲ. ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆ ಆಗುವ ಸಂಭವ ಇದೆ. ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರುತ್ತದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications