ವಿಶ್ವ ವಿಖ್ಯಾತ ಜಂಬೂ ಸವಾರಿಗೆ ಅಡ್ಡಿ ಪಡಿಸಿದರೆ ಕಠಿಣ ಕ್ರಮ
ಬೆಂಗಳೂರು : ವಿಶ್ವ ವಿಖ್ಯಾತ ಜಂಬೂ ಸವಾರಿಗೆ ಅಡ್ಡಿಯುಂಟು ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಶುಕ್ರವಾರ ರಾಜ್ಯ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಹೇಳಿದ್ದಾರೆ. ಮೆರವಣಿಗೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದೂ ಎಂದೂ ಅವರು ಹೇಳಿದ್ದಾರೆ.
ವಿಜಯ ದಶಮಿಯ ದಿನ ಜಂಬೂ ಸವಾರಿ ನಡೆದೇ ತೀರುತ್ತದೆ ಎಂದು ಸಚಿವ ವಿಶ್ವನಾಥ್ ಪ್ರಕಟಿಸುತ್ತಿದ್ದಂತೆಯೇ ಮೈಸೂರಿನಲ್ಲಿ ಡಾ. ರಾಜ್ ಅಭಿಮಾನಿಗಳು ನಾವು ಈ ಬಾರಿ ಅದ್ದೂರಿಯ ದಸರಾ ಮಹೋತ್ಸವ - ಮೆರವಣಿಗೆಗೆ ಆವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ದಸರಾ ನಮ್ಮ ನಾಡಹಬ್ಬ, ದಸರೆಯ ಮೆರವಣಿಗೆ ನೋಡಲು ದೇಶ ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ, ನಮ್ಮ ನಾಡ ಹಬ್ಬದ ಉತ್ಸವಕ್ಕೆ ಚ್ಯುತಿ ಬಾರದಂತೆ ವರ್ತಿಸ ಬೇಕಾದ್ದು, ಕನ್ನಡಿಗರೆಲ್ಲರ ಕರ್ತವ್ಯ, ಎಲ್ಲ ಸಂಘ ಸಂಸ್ಥೆಗಳೂ ಸರಕಾರದೊಂದಿಗೆ ಸಹಕರಿಸಬೇಕು ಎಂದು ಖರ್ಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಉನ್ನತ ಅಧಿಕಾರಿಗಳ ಸಭೆ ಕರೆದು ಸಮಾಲೋಚಿಸಲಾಗುವುದು ಎಂದೂ ಹೇಳಿದ್ದಾರೆ.
ಅಪಹರಣ ಹತ್ತಿಕ್ಕಲು ವಿಶೇಷ ಪಡೆ : ರಾಜ್‌ಕುಮಾರ್ ಅವರ ಅಪಹರಣವಾಗಿ 68 ದಿನಗಳು ಕಳೆದಿವೆ. ಕನ್ನಡಿಗರ ಭಾವನಾತ್ಮಕ ಸಂಬಂಧಗಳ ಮೇಲೆ ಇದು ಪರಿಣಾಮ ಬೀರುತ್ತದೆ. ಹೀಗಾಗಿ ಅಭಿಮಾನಿಗಳು ವೈಭವದ ದಸರೆಗೆ ಅಡ್ಡಿ ಮಾಡುತ್ತೇವೆ ಎಂದಿದ್ದಾರೆ. ಅದರಲ್ಲಿ ತಪ್ಪಿಲ್ಲ. ಆದರೆ, ಸರಕಾರ ತನ್ನ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ ಇದನ್ನು ಅರಿತು ಎಲ್ಲರೂ ದಸರಾ ಮಹೋತ್ಸವ ಮೆರವಣಿಗೆಗೆ ಸಹಕರಿಸಬೇಕು ಎಂದು ಅವರು ಹೇಳಿದರು.
ಕಳೆದೆರಡು ದಿನಗಳ ಹಿಂದೆಯಷ್ಟೇ ನಗರದ ಉದ್ಯಮಿ ನಾರಾಯಣ ಭಟ್ ಅಪಹರಣವಾಗಿತ್ತು. ಅವರು ಸುರಕ್ಷಿತವಾಗಿ ಬಿಡುಗಡೆ ಗೊಂಡಿದ್ದಾರೆ. ಇನ್ನು ಮುಂದೆ ರಾಜ್ಯದಲ್ಲಿ ಅಪಹರಣ ಪ್ರಕರಣಗಳು ಜರುಗದಂತೆ ಹಾಗೂ ಅವುಗಳನ್ನು ಹತ್ತಿಕ್ಕಲು ವಿಶೇಷ ದಳವನ್ನು ರಚಿಸಲಾಗುವುದು ಎಂದೂ ಖರ್ಗೆ ಹೇಳಿದ್ದಾರೆ. ಈ ಸಂಬಂಧ ಆಯ್ದ ಪೊಲೀಸ್ ಅಧಿಕಾರಿಗಳಿಗೆ ವಿಶೇಷ ತರಬೇತಿ ನೀಡಲೂ ಸರಕಾರ ಉದ್ದೇಶಿಸಿದೆ ಎಂದೂ ಅವರು ಹೇಳಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications