ದ.ಕ. ಸೇರಿದಂತೆ 58 ಜಿಲ್ಲೆಗಳಲ್ಲಿ 375 ಕೋಟಿ ರು. ಕುಡಿಯುವ ನೀರು ಯೋಜನೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯೂ ಸೇರಿದಂತೆ ದೇಶದ 58 ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ 375 ಕೋಟಿ ರುಪಾಯಿಯ ಬೃಹತ್ ಯೋಜನೆಯನ್ನು ಜಾರಿ ಮಾಡಲಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ 224 ಕೋಟಿ ರುಪಾಯಿ ಬಿಡುಗಡೆಯಾಗಿದೆ ಎಂದು ಕೇಂದ್ರದ ಹೊಸ ಗ್ರಾಮೀಣಾಭಿವೃದ್ಧಿ ಸಚಿವ ವೆಂಕಯ್ಯನಾಯ್ಡು ಗುರುವಾರ ತಿಳಿಸಿದರು.
ಮಂಗಳೂರಲ್ಲಿ ಗುರುವಾರ ಮುಕ್ತಾಯವಾದ ಬಿಜೆಪಿ ಕಾರ್ಯಕರ್ತರ ತರಬೇತಿ ಶಿಬಿರದಲ್ಲಿ ಭಾಗವಹಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ರಾಜೀವ್‌ಗಾಂಧಿ ಕುಡಿಯುವ ನೀರಿನ ತಾಂತ್ರಿಕ ಯೋಜನೆಯನ್ವಯ ಜಾರಿಗೊಳಿಸುವ ಹೊಸ ಯೋಜನೆಗೆ ಹಣ ದೊರೆಯಲಿದೆ. ಯೋಜನೆಗಾಗಿ ಈಗಾಗಲೇ 224 ಕೋಟಿ ರುಪಾಯಿ ಬಿಡುಗಡೆಯಾಗಿದ್ದು, ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಗಾಗಿ ಮೀಸಲಿಟ್ಟಿರುವ 40 ಕೋಟಿ ರುಪಾಯಿ ಪೈಕಿ 11 ಕೋಟಿ ರುಪಾಯಿಯೂ ಸೇರಿದೆ ಎಂದರು.
ಗ್ರಾಮಾಣಾಭಿವೃದ್ಧಿ ನನಗೆ ಹೊಸ ಖಾತೆ. ಈ ಹಿಂದೆ ಕೆಲವು ಅಧಿಕಾರಿಗಳ ಹಾಗೂ ರಾಜ್ಯ ಸರ್ಕಾರಗಳ ನಿರ್ಲಕ್ಷ ್ಯದಿಂದ ಯೋಜನೆಗಳು ಫಲಾನುಭವಿಗಳಿಗೆ ಪೂರ್ಣ ಪ್ರಮಾಣದಲ್ಲಿ ತಲುಪಿಲ್ಲ. ಮಹಿಳೆಯರು, ಕೃಷಿಕರು, ಹಿಂದುಳಿದ ವರ್ಗದವರು ಹಾಗೂ ಬಡ ಜನರಿಗಾಗಿ ಇರುವ ವಿವಿಧ ಯೋಜನೆಗಳು ಸಂಪೂರ್ಣವಾಗಿ ಫಲಾನುಭವಿಗಳಿಗೆ ದಕ್ಕುವಂತೆ ಮಾಡುವುದೇ ನನ್ನ ಉದ್ದಿಶ್ಯ. ಈ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸಲು ದೇಶಾದ್ಯಂತ ಕಾರ್ಯಾಗಾರಗಳನ್ನೂ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಇನ್ನು 3 ವರ್ಷಗಳಲ್ಲಿ ಎಲ್ಲಾ ಹಳ್ಳಿಗಳಿಗೂ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಕೇಂದ್ರ ಸರ್ಕಾರ ಸಂಕಲ್ಪ ಮಾಡಿದೆ ಎಂದು ಸಚಿವರು ಹೇಳಿದರು.
(ಮಂಗಳೂರು ಪ್ರತಿನಿಧಿಯಿಂದ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications