ಜಂಬೂಸವಾರಿಗೆ ದಾರಿಬಿಡುತ್ತಿರುವ ಮಳೆ
ಬೆಂಗಳೂರು : ಮಳೆ ಹೊಯ್ದು ನಿಂತಿದೆ. ಸುಡುತ್ತಿದ್ದ ಗುಲ್ಬರ್ಗಾ ತಣ್ಣಗಾಗಿದೆ. ಅಲ್ಲಿ ದಿನದ ಗರಿಷ್ಠ ಉಷ್ಣಾಂಶವೇ 18.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮುಂಗಾರು ದುರ್ಬಲವಾಗಿದೆ. ದಕ್ಷಿಣ ಒಳನಾಡಿನಲ್ಲಿ ಹಾಗೂ ಕರಾವಳಿಯ ಕೆಲವೆಡೆ ಮಾತ್ರ ಚದುರಿದಂತೆ ಮಳೆ ಬಿದ್ದಿದೆ. ಮುನ್ಸೂಚನೆಯಂತೆ ಮುಂದಿನ 48 ಗಂಟೆಗಳ ಅವಧಿಯಲ್ಲಿ ದಕ್ಷಿಣ ಒಳನಾಡಿನ ಕೆಲವೆಡೆ ಚದುರಿದಂತೆ ಮಳೆ ಆಗಲಿದೆ.
ತಿಪಟೂರು, ಬಾದಾಮಿಯಲ್ಲಿ ತಲಾ 5 ಸೆಂಟಿ ಮೀಟರ್, ಲೋಕಾಪುರ, ಚಿತ್ರದುರ್ಗಗಳಲ್ಲಿ 4 ಸೆಂಟಿ ಮೀಟರ್, ಚಿಕ್ಕಬಳ್ಳಾಪುರ, ಅರಕಲಗೂಡು, ಎನ್.ಆರ್.ಪುರ, ಎರಗಟ್ಟಿಯಲ್ಲಿ ತಲಾ 3 ಹಾಗೂ ಚಿಕ್ಕನಾಯಕನಹಳ್ಳಿಯಲ್ಲಿ 1 ಸೆಂಟಿ ಮೀಟರ್ ಮಳೆ ಬಿದ್ದಿದೆ.
ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಅವಧಿಯಲ್ಲಿ ಭಾಗಶಃ ಮೋಡ ಮುಸುಕಿದ ವಾತಾವರಣ ಇದ್ದು, ಸಂಜೆ ಅಥವಾ ರಾತ್ರಿ ಮಳೆ ಬೀಳುವ ಸಂಭವ ಇದೆ. ಅಂದಹಾಗೆ ಇಂದು ಬೆಂಗಳೂರಿನಲ್ಲಿ ಗರಿಷ್ಠ 29 ಹಾಗೂ ಕನಿಷ್ಠ 19.ಡಿ.ಸೆ. ತಾಪಮಾನ ಇತ್ತು. ಮೈಸೂರಿನ ಕೆಲವು ಸಂಘಟನೆಗಳು ವಿಶ್ವವಿಖ್ಯಾತ ದಸರೆಯ ಜಂಬೂಸವಾರಿಗೆ ಅಡ್ಡಿ ಮಾಡುತ್ತೇವೆ ಎಂದು ಹೇಳಿಕೊಂಡಿರುವಾಗ ತಾನೂ ಅಡ್ಡಿ ಮಾಡಬಾರದೆಂದು ಮಳೆ ತಣ್ಣಗಾಗುತ್ತಿರುವಂತಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications