ಕೆನರಾ ಬ್ಯಾಂಕ್ಗೆ ಅ.10ರಂದು ಕಾಮನ್ವೆಲ್ತ್ ಪ್ರತಿನಿಧಿಗಳು
ಬೆಂಗಳೂರು :ಗ್ರಾಮೀಣ ಪ್ರದೇಶದ ಮಹಿಳೆಯರು ಸಣ್ಣ ಉದ್ದಿಮೆಗಳನ್ನು ಸ್ಥಾಪಿಸಿ ಸ್ವಾವಲಂಬಿಗಳಾಗುವಲ್ಲಿ ಕೆನರಾ ಬ್ಯಾಂಕ್ ವಹಿಸಿರುವ ಪಾತ್ರದ ಬಗ್ಗೆ ಅಧ್ಯಯನ ನಡೆಸಲು ಹಾಗೂ ಸಾಧನೆಯ ಪರಾಮರ್ಶೆಗಾಗಿ ಕಾಮನ್ವೆಲ್ತ್ ರಾಷ್ಟ್ರಗಳ ಪ್ರತಿನಿಧಿಗಳು ಮಂಗಳವಾರ ನಗರದ ಕೆನರಾಬ್ಯಾಂಕ್ ಕಚೇರಿಗೆ ಭೇಟಿ ನೀಡಲಿದ್ದಾರೆ.
ಬಾಂಗ್ಲಾದೇಶ, ಕೊರೀಯಾ, ಭೂತಾನ್, ಕೀನ್ಯಾ, ತಾಂಜೇನಿಯಾ, ನೇಪಾಳ್, ಶ್ರೀಲಂಕಾ ಮೊದಲಾದ ದೇಶಗಳ ಪ್ರತಿನಿಧಿಗಳು ಮಹಾತ್ಮಾ ಗಾಂಧೀ ರಸ್ತೆಯಲ್ಲಿರುವ ವೃತ್ತ ಕಚೇರಿಗೆ ಭೇಟಿ ನೀಡಿ ಬ್ಯಾಂಕಿನ ಸಾಧನೆಗಳ ಬಗ್ಗೆ ಹಾಗೂ ಗ್ರಾಮೀಣ ಪ್ರದೇಶದ ಮಹಿಳೆಯರು ಆದಾಯ ತರುವ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಬಗ್ಗೆ ಅಧ್ಯಯನ ನಡೆಸಲಿದ್ದಾರೆ.
ಬ್ಯಾಂಕಿನ ಜನರಲ್ ಮ್ಯಾನೇಜರ್ ಎಂ.ಎಸ್. ರಾವ್ ಅವರು, ಕಾಮನ್ವೆಲ್ತ್ ಪ್ರತಿನಿಧಿಗಳಿಗೆ ಬ್ಯಾಂಕಿನ ಸಾಧನೆಯ ವಿವರಗಳನ್ನು ನೀಡಲಿದ್ದಾರೆ. ಈ ಪ್ರತಿನಿಧಿಗಳ ತಂಡ ಆನಂತರ ಬ್ಯಾಂಕಿನ ವಿಜಯಪುರ ಶಾಖೆ ಹಾಗೂ ರೇಷ್ಮೆ ರೀಲಿಂಗ್ ಉದ್ಯಮಕ್ಕಾಗಿ ಬ್ಯಾಂಕ್ ಮಹಿಳೆಯರಿಗೆ ನೀಡಿರುವ ನೆರವಿನ ಹಾಗೂ ಉದ್ಯಮದ ಪ್ರಗತಿ ಪರಿಶೀಲನೆಗಾಗಿ ತೆರಳಲಿದೆ ಎಂದು ಬ್ಯಾಂಕ್ನ ಪ್ರಕಟಣೆ ತಿಳಿಸಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications