ಮಳೆಯ ನಡುವೆಯೂ ಬೆಂಗಳೂರಲ್ಲಿ ವೈಭವದ ದಸರಾ ಮೆರವಣಿಗೆ
ಬೆಂಗಳೂರು :ರಾಜ್ಯದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ನಡೆಯುವ ದಸರಾ ಮಹೋತ್ಸವ ಮಾದರಿಯಲ್ಲೇ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲೂ ಪ್ರತಿವರ್ಷ ದಸರೆ ನಡೆಯುತ್ತದೆ. ಇತ್ತೀಚಿನ ವರ್ಷಗಳಲ್ಲಿ ಭಾರಿ ಪ್ರಸಿದ್ಧಿ ಪಡೆಯುತ್ತಿರುವ ಜಯಚಾಮರಾಜೇಂದ್ರ ನಗರದ ದಸರಾ ಭಾನುವಾರ ಸಂಜೆ ವಿಜೃಂಭಣೆಯಿಂದ ಜರುಗಿತು.
ಬೆಂಗಳೂರಿನಲ್ಲಿ ಭಾನುವಾರ ಮಧ್ಯಾಹ್ನದಿಂದಲೇ ಭಾರಿ ಮಳೆ ಸುರಿಯಿತು. ಸಂಜೆಯ ವೇಳೆಗೆ ನಿಂತಿತಾದರೂ, ಸಣ್ಣಗೆ ಹನಿಯುತ್ತಲೇ ಇತ್ತು. ಈ ತುಂತುರ ಸಿಂಚನದ ನಡುವೆಯೂ ಬೆಂಗಳೂರು ದಸರಾ ಮೆರವಣಿಗೆ ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದರು.
ಮುನಿರೆಡ್ಡಿ ಪಾಳ್ಯ ಎಂದೇ ಪರಿಚಿತವಾಗಿರುವ ಜೆ.ಸಿ. ನಗರದ ಸುತ್ತ ಮುತ್ತ ಇರುವ ಗಂಗಾನಗರ, ಮೋತಿ ನಗರ, ಸುಲ್ತಾನಪಾಳ್ಯ, ಬೈರಸಂದ್ರವೇ ಮೊದಲಾದ ಬಡಾವಣೆಗಳಲ್ಲಿರುವ ದೇವಾಲಯಗಳ 60ಕ್ಕೂ ಹೆಚ್ಚು ಉತ್ಸವ ಮೂರ್ತಿಗಳ ಪಲ್ಲಕ್ಕಿ ಉತ್ಸವವೂ ಈ ಸಂದರ್ಭದಲ್ಲಿ ನಡೆಯಿತು.
ಆಶ್ವಯುಜ ಪಾಡ್ಯದ ದಿನದಿಂದಲೇ ವಿದ್ಯುಕ್ತವಾಗಿ ಇಲ್ಲಿ ಆರಂಭಗೊಂಡ ದಸರಾ ಉತ್ಸವ ದಶಮಿಯ ಮೆರವಣಿಗೆಯಾಂದಿಗೆ ಸಂಪೂರ್ಣವಾಯಿತು. ಸ್ಥಳೀಯ ಮುಖಂಡರೂ, ಸಚಿವರೂ ಆದ ರೋಷನ್ ಬೇಗ್, ಮಾಜಿ ಸಚಿವ ಆರ್. ಕೃಷ್ಣಪ್ಪ, ನಗರ ಪೊಲೀಸ್ ಆಯುಕ್ತ ಮಡಿಯಾಳ್ ಮುಂತಾದವರು ಈ ದಸರಾ ಮಹೋತ್ಸವದಲ್ಲಿ ಭಾಗವಹಿಸಿದ್ದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications