ಬರುವ ಶೈಕ್ಷಣಿಕ ವರ್ಷದಿಂದ ಎಲ್ಲಾ ಸರ್ಕಾರಿ ಕಾಲೇಜುಗಳಲ್ಲಿ ಕಂಪ್ಯೂಟರ್ ಶಿಕ್ಷಣ
ಮೈಸೂರು : ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಕಾಲೇಜುಗಳಲ್ಲಿ ಕಂಪ್ಯೂಟರ್ ಶಿಕ್ಷಣ ನೀಡಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ. ಪರಮೇಶ್ವರ್ ಸೋಮವಾರ ತಿಳಿಸಿದ್ದಾರೆ.
ಮೈಸೂರು ಮಹಾರಾಣಿ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡುತ್ತಿದ್ದರು. ಕೇವಲ ವಿಜ್ಞಾನ ಅಭ್ಯಸಿಸುವ ವಿದ್ಯಾರ್ಥಿಗಳಿಗಷ್ಟೇ ಕಂಪ್ಯೂಟರ್ ಶಿಕ್ಷಣ ಸೀಮಿತವಾಗದೆ ಕಲೆ, ವಾಣಿಜ್ಯ ಮತ್ತು ಕೃಷಿ ವಿಷಯಗಳನ್ನು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಅದು ಲಭಿಸಬೇಕು ಎಂದು ಪರಮೇಶ್ವರ್ ಅಭಿಪ್ರಾಯಪಟ್ಟರು.
ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಮೀಸಲಾತಿ : ಒಂದರಿಂದ ಹತ್ತನೇ ಇಯತ್ತೆವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣದಲ್ಲಿ ಸೀಟುಗಳನ್ನು ಮೀಸಲಿಡುವ ಬಗೆಗೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಂದಿನ ಸಚಿವ ಸಂಪುಟದಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪರಮೇಶ್ವರ್ ಹೇಳಿದರು.
ಮಹಿಳೆಯರಿಗೆ ಆದ್ಯತೆ : ವೃತ್ತಿಪರ ಶಿಕ್ಷಣದಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲು ಹೊಸ ಶಿಕ್ಷಣ ನೀತಿ ರೂಪಿಸಲಾಗಿದ್ದು, ಇದರನ್ವಯ ಭವಿಷ್ಯದಲ್ಲಿ ಮಹಿಳೆಯರಿಗೆ ಉಪಯೋಗವಾಗುವ ಹೊಸ ಕೋರ್ಸುಗಳನ್ನು ಪ್ರಾರಂಭಿಸಲಾಗುವುದು. ಉನ್ನತ ಶಿಕ್ಷಣದಲ್ಲಿ ಈಗಿರುವ ಶೇ. 34ರಷ್ಟು ಮಹಿಳಾ ಮೀಸಲಾತಿಯನ್ನು ಇನ್ನಷ್ಟು ಹೆಚ್ಚಿಸುವ ಆಶಯವೂ ಎಸ್.ಎಂ. ಕೃಷ್ಣ ಸರ್ಕಾರಕ್ಕಿದೆ ಎಂದರು.
ಸಮಾರಂಭದಲ್ಲಿ ರಾಜ್ಯಪಾಲೆ ವಿ.ಎಸ್. ರಮಾದೇವಿ ಸಹ ಹಾಜರಿದ್ದರು.
(ಮೈಸೂರು ಪ್ರತಿನಿಧಿಯಿಂದ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications