ಆದಿ ಚುಂಚನಗಿರಿ ಮಠಕ್ಕೆ ಬಾಂಬ್ ಬೆದರಿಕೆ : ಬಿಗಿ ಬಂದೋಬಸ್ತ್
ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿರುವ ಶ್ರೀ ಆದಿಚುಂಚನಗಿರಿ ಶ್ರೀಮಠವನ್ನು ಬಾಂಬ್ ಹಾಕಿ ಸ್ಫೋಟಿಸುವುದಾಗಿ ಅನಾಮಧೇಯ ಕರೆ ಬಂದ ಹಿನ್ನೆಲೆಯಲ್ಲಿ ಶ್ರೀಮಠಕ್ಕೆ ಹಾಗೂ ಮಠ ನಡೆಸುತ್ತಿರುವ ಆಸ್ಪತ್ರೆ, ವೈದ್ಯಕೀಯ ಕಾಲೇಜು ಹಾಗೂ ಆಡಳಿತ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಬೆಂಗಳೂರು, ಹುಬ್ಬಳ್ಳಿ - ವಾಡಿ ಚರ್ಚ್ಗಳಲ್ಲಿ ಸರಣಿ ಬಾಂಬ್ ಸ್ಫೋಟ ನಡೆದ ತರುವಾಯ ಬೆಂಗಳೂರಿನ ಹಲವು ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಹುಸಿ ಕರೆಗಳು ಬಂದಿದ್ದವು. ಆದರೆ, ಶ್ರೀ ಮಠಕ್ಕೇ ಬಾಂಬ್ ಹಾಕುವ ಅನಾಮಧೇಯ ಕರೆ ಶನಿವಾರ ರಾತ್ರಿ ಬಂದಿದೆ.
ಬಾಂಬ್ ಕರೆಯಿಂದ ಭೀತರಾದ ಮಠದ ಆಡಳಿತ ಕಚೇರಿಯ ಸಿಬ್ಬಂದಿ ವಿಷಯವನ್ನು ಕೂಡಲೇ ಪೊಲೀಸ್ ಮಹಾ ನಿರ್ದೇಶಕರಿಗೆ ತಿಳಿಸಿದರು. ತತ್ಕ್ಷಣವೇ ಮಠಕ್ಕೆ ಪೊಲೀಸ್ ಕಾವಲು ಹಾಕಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಆರ್. ಚರಣರೆಡ್ಡಿ ಅವರ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದು, 25ಕ್ಕೂ ಹೆಚ್ಚು ಪೊಲೀಸರನ್ನು ಸಂಸ್ಥೆಯ ರಕ್ಷಣೆಗೆ ನಿಯೋಜಿಸಲಾಗಿದೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications