ಮಳೆ : ತುಮಕೂರು ಜಿಲ್ಲೆಯಲ್ಲಿ 6 ಸಾವು
ತುಮಕೂರು :ಮೇ, ಜೂನ್ ತಿಂಗಳಿನಲ್ಲಿ ರಾಜ್ಯಾದ್ಯಂತ ಮಳೆಯಾಗುತ್ತಿದ್ದಾಗ, ಮಳೆಯಿಲ್ಲ ಎಂದು ಪರಿತಪಿಸುತ್ತಿದ್ದ ತುಮಕೂರು ಜಿಲ್ಲೆಯಾದ್ಯಂತ ಕಳೆದ 10 ದಿನಗಳಿಂದ ಸುರಿದ ಧಾರಾಕಾರ ಮಳೆ 6 ಜೀವಗಳನ್ನು ಬಲಿ ತೆಗೆದುಕೊಂಡಿದೆ. 1215ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ.
ಆಗಸ್ಟ್ ತಿಂಗಳಿನಲ್ಲಿ ಜಿಲ್ಲೆಯಲ್ಲಿ ಬಿದ್ದ ಭಾರಿ ಮಳೆ ಐವರನ್ನು ಬಲಿ ತೆಗೆದುಕೊಂಡು, ಕೋಟ್ಯಂತರ ರುಪಾಯಿ ನಷ್ಟ ಉಂಟು ಮಾಡಿತ್ತು. ಕಳೆದ ವಾರ ಸುರಿದ ಮಳೆ ಶಿರಾ ತಾಲೂಕಿನ ಬುಕ್ಕಾ ಪಟ್ಟಣ ಹೋಬಳಿಯ ಬಾಳಾಪುರ ಗ್ರಾಮದಲ್ಲಿ ಮೂವರು ಮಕ್ಕಳನ್ನು ಬಲಿ ತೆಗೆದುಕೊಂಡಿದೆ. ಎಮ್ಮೆ ಕಾಯಲು ಹೋಗಿದ್ದ ಮೂವರು ಮಕ್ಕಳು ತುಂಬಿ ಹರಿಯುತ್ತಿದ್ದ ಕೆರೆಯಲ್ಲಿ ಮುಳುಗಿ ಮೃತಪಟ್ಟರೆ, ತುಮಕೂರು ನಗರದ ಗೂಡ್ಸ್ಶೆಡ್ ಕಾಲನಿಯ ನಿವಾಸಿ ಸನಾವುಲ್ಲಾ ಮನೆಕುಸಿತದಿಂದ ಮೃತಪಟ್ಟಿದ್ದಾರೆ.
ತಿಪ್ಪಯ್ಯ ಎಂಬಾತ ಗುಬ್ಬಿಯ ಅಮಾನಿಕೆರೆ ಕೋಡಿಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದಾರೆ. ಇದೇ ತಾಲೂಕಿನ ಕಡಬಾ ಕೆರೆಯಲ್ಲಿ ಶಿವರಾಮಯ್ಯ ಎನ್ನುವವರ ಶವವೂ ಪತ್ತೆಯಾಗಿದೆ. ಜಿಲ್ಲೆಯಾದ್ಯಂತ ಸುರಿದ ಮಳೆಯಿಂದ ಹಲವಾರು ಮನೆಗಳು ನೆಲಕಚ್ಚಿವೆ.
ತುಮಕೂರು ತಾಲೂಕಿನಲ್ಲೇ 481, ಗುಬ್ಬಿ ತಾಲೂಕಿನಲ್ಲಿ 542, ಚಿಕ್ಕನಾಯಕನಹಳ್ಳಿಯಲ್ಲಿ 192 ಮನೆಗಳು ಭಾಗಶಃ ಕುಸಿದಿವೆ ಎಂದು ತಿಳಿದುಬಂದಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications