ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ವೋಚ್ಚ ನ್ಯಾಯಾಲಯ ಆವರಣದಲ್ಲಿ ಸ್ಫೋಟ,ಮೂವರಿಗೆ ಗಾಯ

By Staff
|
Google Oneindia Kannada News

Supreme Courtನವದೆಹಲಿ : ಮಂಗಳವಾರ ಬೆಳಗ್ಗೆ ಸರ್ವೋನ್ನತ ನ್ಯಾಯಾಲಯದ ಆವರಣದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸೆಕ್ಯೂರಿಟಿ ಸಿಬ್ಬಂದಿಯಾಬ್ಬರೂ ಸೇರಿದಂತೆ ಕನಿಷ್ಠ ಮೂವರು ಗಾಯಗೊಂಡಿದ್ದಾರೆ ಎಂದು ದೇಹಲಿಯ ವರದಿಗಳ ತಿಳಿಸಿವೆ.

ಸರ್ವೋನ್ನತ ನ್ಯಾಯಾಲಯದ ಹೊರಗೆ ಈ ಸ್ಫೋಟ ನಡೆದಿದೆ. ಮಂಗಳವಾರ ಬೆಳಗ್ಗೆ 11.55ರ ಸಮಯದಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ತಿಲಕ್‌ ಮಾರ್ಗ್‌ ಪೊಲೀಸ್‌ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಸ್ಫೋಟಕ್ಕೆ ಕಾರಣ ಏನು ಎಂಬುದು ಈವರೆಗೆ ತಿಳಿದುಬಂದಿಲ್ಲ.

ಮೂರು ಅಗ್ನಿಶಾಮಕ ದಳದ ವಾಹನಗಳು ಮತ್ತು ಅನೇಕ ಅಂಬ್ಯುಲೆನ್ಸ್‌ ವಾಹನಗಳು ಸ್ಥಳಕ್ಕೆ ಧಾವಿಸಿ ಬಂದವು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ. ಸ್ಫೋಟದಲ್ಲಿ ಗಾಯಗೊಂಡ ಮೂವರನ್ನೂ ಆಸ್ಪತ್ರೆಗೆ ಸೇರಿಸಲಾಗಿದೆ. ಪ್ರಾಥಮಿಕ ವರದಿಗಳ ರೀತ್ಯ ಈ ಸ್ಫೋಟ ಭಗವಾನ್‌ ದಾಸ್‌ ರಸ್ತೆಯ ಸರ್ವೋಚ್ಚ ನ್ಯಾಯಾಲಯದ ಹೊರಭಾಗದಲ್ಲಿ ಸಂಭವಿಸಿದೆ. ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. (ಯು.ಎನ್‌.ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X