ವೀರಪ್ಪನ್ ಸಂಪರ್ಕ ಸಾಧಿಸಿದ ಗೋಪಾಲ್ ನೇತೃತ್ವದಸಂಧಾನ ತಂಡ
ಚೆನ್ನೈ : ರಾಜ್‌ಕುಮಾರ್ ಹಾಗೂ ಮತ್ತಿತರ ಇಬ್ಬರನ್ನು ವೀರಪ್ಪನ್ ಬಂಧನದಿಂದ ಬಿಡಿಸಿಕೊಂಡು ಬರಲು ಕಾಡಿಗೆ ತೆರಳಿರುವ ನಕ್ಕೀರನ್ ಗೋಪಾಲ್ ನೇತೃತ್ವದ ತಂಡ ಶುಕ್ರವಾರ ಬೆಳಗ್ಗೆ ವೀರಪ್ಪನ್ ಚಾರರಿಂದ ಸಂದೇಶ ಸ್ವೀಕರಿಸಿದೆ. ಶುಕ್ರವಾರ ಸಂಜೆಯ ವೇಳೆಗೆ ತಂಡ ವೀರಪ್ಪನ್‌ನನ್ನು ಭೇಟಿ ಮಾಡಲಿದೆ ಎಂದು ನಕ್ಕೀರನ್ ಪತ್ರಿಕೆಯ ಮೂಲಗಳು ತಿಳಿಸಿವೆ.
ಈ ಬಾರಿ ಸಂಧಾನಕಾರ ಗೋಪಾಲ್ ಜತೆ ಇನ್ನೂ ನಾಲ್ವರು ಕಾಡಿಗೆ ತೆರಳಿಸಿದ್ದಾರೆ. ಪಳ ನೆಡುಮಾರನ್, ಪತ್ರಕರ್ತ ಸುಕುಮಾರನ್, ಮಾನವ ಹಕ್ಕು ಆಯೋಗದ ಪ್ರೊ. ಕಲ್ಯಾಣಿ ಅವರನ್ನು ಗುರುವಾರ ಎಲ್.ಟಿ.ಟಿ.ಇ. ಪರ ವಕೀಲ ಚಂದ್ರಶೇಖರನ್ ಜತೆಗೂಡಿದ್ದಾರೆ.
ಬೆಂಗಳೂರು ವರದಿ: ಈ ಮಧ್ಯೆ ಸರ್ವೋಚ್ಚ ನ್ಯಾಯಾಲಯ ಕೇಳಿರುವ ಕೆಲವು ವಿವರಣೆಗಳಿಗೆ ಸಂಬಂಧಿಸಿದಂತೆ ದಾಖಲಾತಿಗಳನ್ನು ಸಲ್ಲಿಸುವ ಸಂಬಂಧ ರಾಜ್ಯ ಸರಕಾರ ಉನ್ನತಾಧಿಕಾರಿಗಳ ಸಭೆಯನ್ನು ಶುಕ್ರವಾರ ನಡೆಸಿದೆ. ಶುಕ್ರವಾರ ಬೆಳಗ್ಗೆ ಮೊದಲ ಸುತ್ತಿನ ಮಾತುಕತೆಗಳು ನಡೆದಿದ್ದು, ಸಂಜೆ ಮತ್ತೆ ಸಭೆ ಮುಂದುವರಿಯಲಿದೆ. ಸಭೆಯಲ್ಲಿ ಚರ್ಚಿಸಿದ ನಂತರ ಟಾಡಾ ಆರೋಪಿಗಳ ಮೊಕ್ಕದ್ದಮೆಗೆ ಸಂಬಂಧಿಸಿದಂತೆ ರಾಜ್ಯದ ನಿಲುವಿನ ದಾಖಲೆ ಸಿದ್ಧಪಡಿಸಲಾಗುವುದು ಎಂದು ರಾಜ್ಯ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಡಿ.ಬಿ. ಚಂದ್ರೇಗೌಡ ತಿಳಿಸಿದ್ದಾರೆ.
ವೀರಪ್ಪನ್ ಬಂಧನಕ್ಕೆ ರಾಜ್ಯ ಸರಕಾರ ಕಳೆದ 10 ವರ್ಷಗಳಿಂದ ಮಾಡಿರುವ ಪ್ರಯತ್ನಗಳು, ಕೈಗೊಂಡ ಕ್ರಮಗಳು ಹಾಗೂ ರಾಜ್‌ಬಿಡುಗಡೆಗೆ ಕೈಗೊಳ್ಳ ಬಹುದಾದ ಪರ್ಯಾಯ ಕಾರ್ಯತಂತ್ರಗಳೇನಾದರೂ ಇದ್ದಲ್ಲಿ ಬಹಿರಂಗವಾಗಿ ತಿಳಿಸಲಾಗದಿದ್ದಲ್ಲಿ ಮೊಹರು ಮಾಡಿದ ಲಕೋಟೆಯಲ್ಲಿ ಸೋಮವಾರದೊಳಗೆ ಸಲ್ಲಿಸುವಂತೆ ಸರ್ವೋನ್ನತ ನ್ಯಾಯಾಲಯ ಆದೇಶಿಸಿರುವ ಹಿನ್ನೆಲೆಯಲ್ಲಿ ಉನ್ನತಾಧಿಕಾರಿಗಳ ಸಭೆ ನಡೆಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ನಾಗಪ್ಪ ಪೊಲೀಸ್ ವಶದಲ್ಲಿಲ್ಲ : ವೀರಪ್ಪನ್ ವಶದಿಂದ ತಪ್ಪಿಸಿಕೊಂಡು ಬಂದ ನಾಗಪ್ಪ ಮಾರಡಗಿ ಅವರನ್ನು ಅಕ್ಟೋಬರ್ 16ರಂದು ನ್ಯಾಯಾಲಯದ ಮುಂದೆ ಹಾಜರು ಪಡಿಸುವಂತೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಶೋಕ್ ಭಾನ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ಆದೇಶಿಸಿದ್ದ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಸಿ. ದಿನಕರ್ ಅವರು ಪ್ರಮಾಣ ಪತ್ರ ಸಲ್ಲಿಸಿದ್ದು, ನಾಗಪ್ಪ ಅವರು ಪೊಲೀಸ್ ವಶದಲ್ಲಿಲ್ಲ ಎಂದು ತಿಳಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications