Get Updates
Get notified of breaking news, exclusive insights, and must-see stories!

ಕೇಂದ್ರಸರಕಾರ ರಾಜ್ಯಕ್ಕೆ ಉತ್ತಮ ರೀತಿಯಲ್ಲಿ ಸ್ಪಂದಿಸಿದೆ -ಕೃಷ್ಣ

ಬೆಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಕಾರ್ಯ ವೈಖರಿಯನ್ನು ಮುಖ್ಯ ಮಂತ್ರಿ ಎಸ್‌. ಎಂ. ಕೃಷ್ಣ ಶ್ಲಾಘಿಸಿದ್ದಾರೆ.

ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರಕಾರ ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯದ ಎಲ್ಲ ಅಗತ್ಯಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದು , ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ. ಯಾವುದೇ ವಿಷಯದಲ್ಲೂ ಕೇಂದ್ರ ಸರಕಾರ ರಾಜ್ಯದ ಕೈ ಬಿಟ್ಟಿಲ್ಲ ಆದರೆ, ರಾಜ್ಯಕ್ಕೆ ಹಣಕಾಸು ಬಿಡುಗಡೆ ಮಾಡುವ ವಿಷಯದಲ್ಲಿ ಮಾತ್ರ ನಮಗೆ ಸೂಕ್ತ ನ್ಯಾಯ ದೊರಕಲಿಲ್ಲ, ಇದನ್ನು ಪ್ರಧಾನಿ ಹಾಗೂ ಹಣಕಾಸು ಸಚಿವರ ಗಮನಕ್ಕೆ ತರಲಾಗಿದೆ ಎಂದು ಕೃಷ್ಣ ಹೇಳಿದ್ದಾರೆ.

ತಾವು ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲೆಲ್ಲಾ ಪ್ರಧಾನಿ ಸೇರಿದಂತೆ ಗೃಹ ಸಚಿವರು ಮತ್ತು ಹಣಕಾಸು ಸಚಿವರು ರಾಜ್ಯದ ಸಮಸ್ಯೆ ಮತ್ತು ಬೇಡಿಕೆಗಳನ್ನು ಆಲಿಸಿ, ಪ್ರತಿಕ್ರಿಯಿಸುತ್ತಿದ್ದರು ಎಂದ ಕೃಷ್ಣ , ರಾಜ್‌ಕುಮಾರ್‌ ಅಪಹರಣ, ವಿಶ್ವಬ್ಯಾಂಕ್‌ನಿಂದ ಸಾಲ ಪಡೆಯುವ ಸಂದರ್ಭದಲ್ಲಿ, ಕಾವೇರಿ ಜಲವಿವಾದದಂತಹ ಪ್ರಮುಖ ವಿಷಯಗಳಲ್ಲಿ ಕೇಂದ್ರ ಸರಕಾರ, ರಾಜ್ಯಕ್ಕೆ ಅನುಕೂಲಕರ ರೀತಿಯಲ್ಲಿಯೇ ಸ್ಪಂದಿಸಿದೆ ಎಂದರು.

(ಇನ್ಫೋ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+