Get Updates
Get notified of breaking news, exclusive insights, and must-see stories!

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಕೇಸರಿ ತೀವ್ರ ಅಸ್ವಸ್ಥ

ಹೊಸದಿಲ್ಲಿ : ತೀವ್ರ ಅಸ್ವಸ್ಥತೆಗೆ ಒಳಗಾಗಿರುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಸೀತಾರಾಮ ಕೇಸರಿ ಅವರನ್ನು ಇಲ್ಲಿನ ರಾಮಮನೋಹರ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ಸೇರಿಸಲಾಗಿದೆ.

ಉಸಿರಾಟದ ತೊಂದರೆ ಮತ್ತು ಎದೆ ನೋವಿನಿಂದ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದ ಕೇಸರಿ ಅವರ ಸ್ಥಿತಿ ಗಂಭೀರವಾಗಿಯೇ ಮುಂದುವರಿದಿದೆ. ಕೇಸರಿ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲೇ ಇರುವ ಕೇಸರಿ ಅವರು ಶುಕ್ರವಾರ ತಮ್ಮ ಮನೆಯಲ್ಲಿ ಜಾರಿ ಬಿದ್ದು ಕಾಲು ಮುರಿದುಕೊಂಡಿದ್ದಾರೆ.

1967ರಲ್ಲಿ ಲೋಕಸಭೆಗೆ ಆರಿಸಿ ಬಂದಿದ್ದ ಕೇಸರಿ, ಐದು ಬಾರಿ ರಾಜ್ಯ ಸಭೆ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ.

ನರಸಿಂಹರಾವ್‌ ಅವರ ನಂತರ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದ ಅವರು ಕಾಂಗ್ರೆಸ್‌ನಲ್ಲಿ ಹೆಚ್ಚು ಕಾಲ ಪಕ್ಷದ ಖಜಾಂಚಿಯಾಗಿ ಕಾರ್ಯನಿರ್ವಹಿಸಿದ್ದಾರೆ.

1997-98ರಲ್ಲಿ ಎಚ್‌. ಡಿ. ದೇವೇಗೌಡ ಮತ್ತು ಐ. ಕೆ. ಗುಜ್ರಾಲ್‌ ಅವರ ಅಲ್ಪಮತದ ಸಮ್ಮಿಶ್ರ ಸರಕಾರಗಳು ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕೇಸರಿ ಎರಡೂ ಸರಕಾರಗಳ ಪತನಕ್ಕೂ ಕಾರಣರಾಗಿದ್ದರು.

ಶರದ್‌ ಯಾದವ್‌ ಚೇತರಿಕೆ : ಹೃದಯ ಬೇನೆ ಹಾಗೂ ತಲೆ ನೋವಿನಿಂದ ಪಾಟ್ಣಾದ ಆಸ್ಪತ್ರೆಗೆ ಸೇರಿದ್ದ ಕೇಂದ್ರ ವಿಮಾನಯಾನ ಸಚಿವ ಶರದ್‌ ಯಾದವ್‌ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪಾಟ್ಣಾದ ಇಂದಿರಾಗಾಂಧಿ ಹೃದ್ರೋಗ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+