ರಾಜ್ ಅಪಹರಣ: ಪರ್ಯಾಯ ಕಾರ್ಯತಂತ್ರಕ್ಕೆಅಡ್ವಾಣಿಗೆ ಮನವಿ
ಬೆಂಗಳೂರು : ಅಹಪೃತ ರಾಜ್ ಹಾಗೂ ಸಂಗಡಿಗರ ಶೀಘ್ರ ಬಿಡುಗಡೆಗೆ ಪರ್ಯಾಯ ಕಾರ್ಯತಂತ್ರ ರೂಪಿಸಬೇಕೆಂದು ಅಖಿಲ ಕರ್ನಾಟಕ ರಾಜ್ ಅಭಿಮಾನಿಗಳ ಸಂಘ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗಳು ಕೇಂದ್ರ ಸರಕಾರಕ್ಕೆ ಮನವಿ ಮಾಡಿವೆ.
ಈ ಸಂಬಂಧ ಸಂಘದ ಅಧ್ಯಕ್ಷ ಸಾ.ರಾ. ಗೋವಿಂದು, ವಾಣಿಜ್ಯ ಮಂಡಳಿ ಅಧ್ಯಕ್ಷ ಕೆ. ಸಿ. ಎನ್. ಚಂದ್ರಶೇಖರ್ ಹಾಗೂ ಟಾಡಾ ಬಂಧಿತರ ಪರ ವಾದಿಸುತ್ತಿರುವ ಮೈಸೂರಿನ ವಕೀಲ ವೇಣುಗೋಪಾಲ್, ಶುಕ್ರವಾರ ಗೃಹಸಚಿವ ಎಲ್. ಕೆ. ಆಡ್ವಾಣಿ ಅವರನ್ನು ಬೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡು ಸರಕಾರಗಳು ಬಿಡುಗಡೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿವೆಯಾದರೂ ಕಾನೂನು ತೊಡಕು ಉಂಟಾಗಿರುವ ಹಿನ್ನಲೆಯಲ್ಲಿ ಕೇಂದ್ರ ಸರಕಾರ ಪರ್ಯಾಯ ಕಾರ್ಯತಂತ್ರಕ್ಕೆ ಮುಂದಾಗಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.
ಕೋರ್ಟ್‌ಗೆ ಮನವರಿಕೆ : ಅಪಹರಣದ ನಂತರ ಎರಡೂ ರಾಜ್ಯಗಳ ಪರಿಸ್ಥಿತಿ ಬಗ್ಗೆ ಕೇಂದ್ರ ಸರಕಾರದ ಬೇಹುಗಾರಿಕೆ ಇಲಾಖೆ ಸಂಗ್ರಹಿಸಿರುವ ವರದಿಯನ್ನು ಸುಪ್ರಿಂಕೋರ್ಟ್‌ಗೆ ಸಲ್ಲಿಸುವಂತೆ ಈ ಸಂದರ್ಭದಲ್ಲಿ ಅಡ್ವಾಣಿ ಅವರನ್ನು ಕೋರಿದರು.
ದಟ್ಟ ಕಾಡಿನಲ್ಲಿ ಸಂಚರಿಸುವ ಕಾಡುಗಳ್ಳನ ಬಗೆಗಿನ ಮಾಹಿತಿ ಕೊರತೆಯೂ ಸೇರಿದಂತೆ ಅನೇಕ ಕಾರಣಗಳಿಂದ ವೀರಪ್ಪನ್ ಬಂಧನ ಸಾಧ್ಯವಾಗಿಲ್ಲ. ಇಷ್ಟಲ್ಲದೆ, ವೀರಪ್ಪನ್ ಬೇಡಿಕೆಯಂತೆ ಟಾಡಾ ಬಂಧಿಗಳನ್ನು ಬಿಡಲು ಎರಡೂ ಸರಕಾರಗಳು ಕೈಗೊಂಡಿರುವ ನಿರ್ಧಾರ ಸಮುದಾಯದ ಹಿತ ಕಾಪಾಡಲು ಎಂಬುದನ್ನು ಕೇಂದ್ರ ಸರಕಾರ, ಸರ್ವೋಚ್ಚ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ಮನವಿಯಲ್ಲಿ ಕೇಳಿಕೊಳ್ಳಲಾಗಿದೆ.
ಕೇಂದ್ರ ಸಹಕಾರ: ರಾಜ್ ಹಾಗೂ ಇತರ ಇಬ್ಬರು ಸಹಚರರ ಬಿಡುಗಡೆಗೆ ಕರ್ನಾಟಕ ಮತ್ತು ತಮಿಳುನಾಡು ಸರಕಾರಗಳು ಕೈಗೊಳ್ಳುವ ಎಲ್ಲ ಕ್ರಮಗಳಿಗೆ ಕೇಂದ್ರ ಸರಕಾರ ಎಲ್ಲ ರೀತಿಯ ಸಹಕಾರ ನೀಡುವುದು ಎಂದು ಆಡ್ವಾಣಿ ಹೇಳಿದ್ದಾರೆ.
ಅಪಹರಣ ಪ್ರಕರಣದ ಕುರಿತು ಕೇಂದ್ರದ ನಿಲುವನ್ನು ಎರಡೂ ರಾಜ್ಯಗಳಿಗೆ ತಿಳಿಸಲಾಗಿದೆ ಎಂದು ಹೇಳಿರುವ ಆಡ್ವಾಣಿ ವಿವರ ನೀಡಲು ನಿರಾಕರಿಸಿದ್ದಾರೆ. ನೆಡುಮಾರನ್ ಅವರನ್ನು ಸಂಧಾನಕಾರರನ್ನಾಗಿ ಕಳಿಸಿರುವುದು ಕೇಂದ್ರಕ್ಕೆ ಸಂಬಂಧಿಸಿದ ವಿಷಯವಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ್ದಾರೆ.
(ಯುಎನ್‌ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications