ಬೆಂಗಳೂರು ದರೋಡೆಗಳ ಸರಣಿಗೆ ಇನ್ನೆರಡು ಪ್ರಕರಣಗಳ ಸೇರ್ಪಡೆ
ಬೆಂಗಳೂರು : ಶುಕ್ರವಾರ ಮಧ್ಯಾಹ್ನ ನಗರದಲ್ಲಿ ನಡೆದ ಎರಡು ದರೋಡೆ ಪ್ರಕರಣಗಳಲ್ಲಿ 1. 17 ಲಕ್ಷರೂಪಾಯಿ ಮತ್ತು 70 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ದೋಚಲಾಗಿದೆ.
ಕಬ್ಬನ್ ಪಾರ್ಕ್ ರಸ್ತೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೋಟಾರ್ ಸೈಕಲ್ ಮೇಲೆ ಹೋಗುತ್ತಿದ್ದ ಪ್ರವೀಣ್ ಕುಮಾರ್ ಎಂಬುವರನ್ನು ಅಡ್ಡಗಟ್ಟಿದ ದರೋಡೆಕೋರರು 1. 17 ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದಾರೆ. ಸುಮಾರು 11. 45ರ ಹೊತ್ತಿಗೆ ಕಸ್ತೂರಿ ಬಾ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್‌ಗೆ ಹಣ ಕಟ್ಟಲು ಪ್ರವೀಣ್ ಕುಮಾರ್‌ತೆರಳುತ್ತಿದ್ದರು. ದಾರಿಯಲ್ಲಿ ಅವರನ್ನು ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದ ಕೆಲವು ದುಷ್ಕರ್ಮಿಗಳು ಅಡ್ಡಗಟ್ಟಿದರು. ಅವರೆಲ್ಲರೂ 25 ರಿಂದ 30 ವರ್ಷ ವಯಸ್ಸಿನವರಾಗಿದ್ದು, ಚಾಕು ತೋರಿಸುವ ಮೂಲಕ ಬೆದರಿಸಿ ಹಣ ಕಿತ್ತುಕೊಂಡಿದ್ದಾರೆ ಎಂದು ಪ್ರವೀಣ್ ಕುಮಾರ್ ಪೊಲೀಸಿಗೆ ದೊರು ಕೊಟ್ಟಿದ್ದಾರೆ.
ಹಳೆ ಮದ್ರಾಸ್ ರಸ್ತೆಯಲ್ಲಿ ನಡೆದ ಇನ್ನೊಂದು ದರೋಡೆ ಪ್ರಕರಣದಲ್ಲಿ ಮೋಯಾ ಚಿಕನ್ ಫಾಸ್ಟ್ ಫುಡ್ ಹೋಟೆಲ್‌ಗೆ ನುಗ್ಗಿದ ದುಷ್ಕರ್ಮಿಗಳು ಹೋಟೆಲ್ ಮಾಲಿಕರ ಪತ್ನಿ ಪ್ರಫುಲ್ಲಾ ವಿ. ಶೆಟ್ಟಿ ಮತ್ತು ಇಬ್ಬರು ಕೆಲಸಗಾರರನ್ನು ಬೆದರಿಸಿ 70 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದಾರೆ.
ಹೋಟೆಲ್‌ಗೆ ಗಿರಾಕಿಗಳಂತೆ ಬಂದ ದುಷ್ಕರ್ಮಿಗಳು ಚಪಾತಿ- ಚಿಕನ್ ತಿಂದು, ಬಿಲ್ ಪಾವತಿಸದೆ, ಹೋಟೆಲ್ ಬಾಗಿಲು ಮುಚ್ಚಿ , ಗಿರಾಕಿಗಳಿಗೆ ಮತ್ತು ಕೆಲಸಗಾರರಿಗೆ ಮಾರಕಾಸ್ತ್ರಗಳನ್ನು ತೋರಿಸಿ ಚಿನ್ನಾಭರಣ ದೋಚಿದ್ದಾರೆ ಎಂದು ಪ್ರಫುಲ್ಲಾ ಶೆಟ್ಟಿ ಪೊಲೀಸರಿಗೆ ದೂರಿತ್ತಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications