ಶೀಘ್ರವೇ ಖಾಸಗಿ ಆಸ್ಪತ್ರೆಗಳ ಉತ್ತರದಾಯಿತ್ವ ಮಸೂದೆ ಮಂಡನೆ- ಸಚಿವ
ಜೈಪುರ: ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಂಗಳ ಉತ್ತರದಾಯಿತ್ವಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಮಸೂದೆಯನ್ನು ಶೀಘ್ರವಾಗಿ ಮಂಡಿಸಲಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸಿ. ಪಿ. ಥಾಕೂರ್ ಸೋಮವಾರ ಹೇಳಿದ್ದಾರೆ.
ಗರ್ಭಪಾತ, ಏಡ್ಸ್ ಮತ್ತು ಹೆಪಟೈಟಿಸ್ ರೋಗಗಳ ಬಗ್ಗೆ ನಿಖರ ಮಾಹಿತಿ ದಾಖಲಿಸುವುದು ಸೇರಿದಂತೆ ಎಲ್ಲ ಖಾಸಗಿ ಆಸ್ಪತ್ರೆಗಳು ಸೂಕ್ತ ಉತ್ತರದಾಯಿತ್ವ ಹಾಗೂ ಪಾರದರ್ಶಕ ವ್ಯವಸ್ಥೆಯನ್ನು ಅನುಸರಿಸಲು ಮತ್ತು ಆಧುನಿಕ ವೈದ್ಯಕೀಯ ಬೆಳವಣಿಗೆಗಳ ಬಗ್ಗೆ ಖಾಸಗಿ ವೈದ್ಯರಿಗೆ ಅರಿವಿರುವಂತೆ ನೋಡಿಕೊಳ್ಳಲು ನಿರಂತರ ವೈದ್ಯಕೀಯ ಶಿಕ್ಷಣ ನೀಡಲು ಕ್ರಮ ಮುಂತಾದ ಹೊಸ ಪದ್ಧತಿಗಳು ಮಸೂದೆಯಿಂದ ಜಾರಿಗೊಳ್ಳಲಿವೆ.
ಹೊಸ ಕಾರ್ಯಸೂಚಿ: ಖಾಸಗಿ ನರ್ಸಿಂಗ್ ಹೋಂಗಳು ಮತ್ತು ಆಸ್ಪತ್ರೆಗಳು ನಾಯಿಕೊಡೆಗಳಂತೆ ತಲೆಯೆತ್ತುತ್ತಿರುವುದನ್ನು ತಡೆಯಲು ಸರಕಾರ ಮೂರು ಅಂಶಗಳ ಹೊಸ ಕಾರ್ಯಸೂಚಿಯನ್ನು ಹೊಂದಲಿದ್ದು , ಫಾರ್ಮಾಸ್ಯೂಟಿಕಲ್ ಕಂಪನಿಗಳು ಹೆಚ್ಚಿಸುತ್ತಿರುವ ಔಷಧಿಗಳ ಬೆಲೆಗಳ ಮೇಲೆ ಕಡಿವಾಣ ಹಾಕಲಾಗುವುದೆಂದು ಸಚಿವರು ತಿಳಿಸಿದ್ದಾರೆ.
ಔಷಧಿಗಳ ಬೆಲೆ ಕುರಿತು ಅಂತಿಮ ನಿರ್ಧಾರಕ್ಕೆ ಬರುವ ಮುಂಚೆ ಔಷಧಿ ಕಂಪನಿಗಳು ಮತ್ತು ಸರಕಾರದ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆಯಲಾಗುವುದೆಂದು ಥಾಕೂರ್ ತಿಳಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications