ರಾಜ್ ಬಿಡುಗಡೆಯ ಸುದ್ದಿಗಳೆಲ್ಲಾ ಶುದ್ಧ ಸುಳ್ಳು : ಸಚಿವ ಖರ್ಗೆ
ಬೆಂಗಳೂರು : ರಾಜ್‌ಕುಮಾರ್ ಹಾಗೂ ಇತರ ಇಬ್ಬರು ಒತ್ತೆಯಾಳುಗಳನ್ನು ಕಾಡುಗಳ್ಳ ವೀರಪ್ಪನ್ ಬಿಡುಗಡೆಗೊಳಿಸಿದ್ದಾನೆ ಎಂಬುದಕ್ಕೆ ಯಾವುದೇ ಆಧಾರವಿಲ್ಲ ಎಂದು ರಾಜ್ಯದ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ವದಂತಿಗಳಿಗೆ ಕಿವಿಗೊಡದಂತೆ ಅವರು ಮನವಿ ಮಾಡಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ವೀರಪ್ಪನ್ ಜತೆಗಿನ ಈ ಬಾರಿಯ ಸಂಧಾನ ಶುಭಕರವಾಗಿ ಸಾಗಿದೆ. ಅವರು, ರಾಜ್‌ಕುಮಾರ್ ಅವರನ್ನು ಸುರಕ್ಷಿತವಾಗಿ ಬಿಡಿಸಿಕೊಂಡು ಬರುವ ಬಗ್ಗೆ ಶಕ್ತಿ ಮೀರಿ ಶ್ರಮಿಸುತ್ತಿದ್ದಾರೆ ಎಂದು ಸರಕಾರಕ್ಕೆ ಬಂದಿರುವ ಖಚಿತ ಮಾಹಿತಿಗಳು ತಿಳಿಸುತ್ತವೆ ಎಂದು ಹೇಳಿದ್ದಾರೆ. ರಾಜ್ಯ ಸರಕಾರವು ತಮಿಳುನಾಡು ಉನ್ನತಾಧಿಕಾರಿಗಳೊಂದಿಗೆ ಸತತ ಸಂಪರ್ಕ ಇಟ್ಟುಕೊಂಡಿದ್ದು, ಯಾವುದೇ ಕ್ಷಣದಲ್ಲಿ ಶುಭವಾರ್ತೆ ಹೊರಬೀಳುತ್ತದೆ ಎಂದೂ ಹೇಳಿದ್ದಾರೆ.
ರಾಜ್‌ಕುಮಾರ್ ಅವರ ಬಿಡುಗಡೆಗೆ ಯಾವುದೇ ನಿರ್ದಿಷ್ಟ ಗಡುವು ಅಥವಾ ಸಮಯ ನಿಗದಿಪಡಿಸಲಾಗಿಲ್ಲ ಎಂದ ಅವರು, ಕಾಡಿನ ಅಂಚಿನಲ್ಲಿ ಸುಳಿದಾಡುತ್ತಿರುವ ವಾಹನಗಳ ಬಗ್ಗೆ ಪ್ರಶ್ನಿಸಿದಾಗ, ರಾಜ್ಯ ಸರಕಾರ ಯಾವುದೇ ವಾಹನಗಳನ್ನು ಕಾಡಿನಂಚಿಗೆ ಕಳುಹಿಸಿಲ್ಲ ಎಂದು ಹೇಳಿದರು. ನೆಡುಮಾರನ್ ಹಾಗೂ ಗೋಪಾಲ್ ಅವರ ಕಚೇರಿಯಿಂದ ಬರುತ್ತಿರುವ ವರದಿಗಳ ಬಗ್ಗೆ ಪ್ರತಿಕ್ರಿಯಿಸಲೂ ಅವರು ನಿರಾಕರಿಸಿದರು.
ಅಧಿಕೃತ ಮಾಹಿತಿಗಷ್ಟೇ ಮನ್ನಣೆ : ವದಂತಿಗಳಿಗೆ ಅಥವಾ ಬೇರಾವುದೇ ಮೂಲದ ಸುದ್ದಿಗೆ ರಾಜ್ಯ ಸರಕಾರ ಕಿವಿಗೊಡುವುದಿಲ್ಲ. ತಮಿಳುನಾಡು ಸರಕಾರದಿಂದ ಅಧಿಕೃತ ಮಾಹಿತಿ ಬರುವವರೆಗೂ ಕಾಯುತ್ತೇವೆ ಎಂದು ಅವರು ಹೇಳಿದರು. (ಯು.ಎನ್.ಐ)
ವಾರ್ತಾ ಸಂಚಯ
ಮುಖಪುಟ / ರಾಜ್ ಅಪಹರಣ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications