Get Updates
Get notified of breaking news, exclusive insights, and must-see stories!

ಕಾನೂನು ಸುವ್ಯವಸ್ಥೆ ಕಾಪಾಡಲು ಮೈಸೂರು ಜಿಲ್ಲೆಯಲ್ಲಿ ಬಿಗಿ ಬಂದೋಬಸ್ತ್‌

ಮೈಸೂರು : ರಾಜ್‌ ಬಿಡುಗಡೆಯ ನಂತರ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಜಿಲ್ಲೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌. ಕೆ. ಶ್ರೀನಿವಾಸನ್‌ ಹೇಳಿದ್ದಾರೆ.

ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿ ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ಹೆಚ್ಚುವರಿ ಪೊಲೀಸರನ್ನು ನೇಮಿಸಲಾಗಿದೆ. ಮೈಸೂರು ನಗರದಲ್ಲಿಯೂ ಸಶಸ್ತ್ರ ಮೀಸಲು ಪಡೆ ಸೇರಿದಂತೆ ಸಾಕಷ್ಟು ಪೊಲೀಸರನ್ನು ನಿಯೋಜಿಸಲಾಗಿದ್ದು, ತಮಿಳರು ವಾಸಿಸುವ ಪ್ರದೇಶಗಳಲ್ಲಿ ಹೆಚ್ಚಿನ ಮುಂಜಾಗ್ರತೆ ತೆಗೆದುಕೊಳ್ಳಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಸಿ. ಚಂದ್ರಶೇಖರನ್‌ ಹೇಳಿದ್ದರು.

ನಕ್ಕೀರನ್‌ ಗೋಪಾಲ್‌ ಮತ್ತಿತರ ಸಂಧಾನಕಾರರ ತಂಡ ವೀರಪ್ಪನ್‌ ಜೊತೆ ನಡೆಸಿದ ಮಾತು ಕತೆ ಯಶಸ್ವಿಯಾಗಿದ್ದು, ಭಾನುವಾರ ರಾತ್ರಿ ರಾಜ್‌ಕುಮಾರ್‌ ಅವರನ್ನು ವೀರಪ್ಪನ್‌ ಬಿಡುಗಡೆ ಮಾಡಲಿದ್ದಾನೆ ಎಂಬ ಸುದ್ದಿಯನ್ನು ಮಾಧ್ಯಮಗಳು ಪ್ರಕಟಿಸಿದ್ದು , ಆ ಹಿನ್ನೆಲೆಯಲ್ಲಿ ರಾಜ್ಯದ ಜನತೆ ರಾಜ್‌ ಬಿಡುಗಡೆಯನ್ನು ಸಂಭ್ರಮದಿಂದ ಎದುರು ನೋಡುತ್ತಿದ್ದಾರೆ.

(ಇನ್ಫೋ ವಾರ್ತೆ)


ಮುಖಪುಟ / ರಾಜ್‌ ಅಪಹರಣ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+