ವಿಶ್ವ ವಿದ್ಯಾಲಯಗಳ ರಚನೆಯಲ್ಲಿ ಪರಿವರ್ತನೆ - ಸಚಿವ ಪರಮೇಶ್ವರ್
ಮಂಗಳೂರು : ಶಿಕ್ಷಣ ವ್ಯವಸ್ಥೆಯನ್ನು ಬದಲಿಸುವ ನಿಟ್ಟಿನಲ್ಲಿ ವಿಶ್ವ ವಿದ್ಯಾಲಯಗಳ ರಚನೆಯನ್ನು ಪರಿವರ್ತಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಅವರು ಸೋಮವಾರ, ಮಂಗಳೂರು ವಿಶ್ವವಿದ್ಯಾಲಯದ ಕಂಪ್ಯೂಟರ್ ವಿಜ್ಞಾನ ವಿಭಾಗದಿಂದ ಎಂಎಸ್ಸಿ ಯಲ್ಲಿ ಇನ್-ಫರ್ಮೇಷನ್ ಸಿಸ್ಟಮ್ಸ್ ಮತ್ತು ಮೆರಾೖನ್ ಜಿಯಾಲಜಿ ವಿಭಾಗದಿಂದ ಎಂ. ಎಸ್. ಪದವಿಯಲ್ಲಿ ಜಿಯೋ ಇ-ನ್-ಫರ್ಮಾಟಿಕ್ಸ್ ಎಂಬ ಎರಡು ಹೊಸ ವಿಷಯಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಪದವಿ ತರಗತಿಗಳಲ್ಲಿಯೂ ಕಂಪ್ಯೂಟರ್ ಕಲಿಕೆಯನ್ನು ಐಚ್ಛಿಕ ವಿಷಯವನ್ನಾಗಿ ಅಳವಡಿಸಿಕೊಳ್ಳಲಾಗುವುದು. 2008ನೇ ಇಸವಿಯ ವೇಳೆಗೆ 22.5 ಲಕ್ಷ ಕಂಪ್ಯೂಟರ್ ಸಾಫ್ಟ್ವೇರ್ ಇಂಜಿನಿಯರ್ಗಳ ಅವಶ್ಯಕತೆ ಇದೆ. ದೇಶದಲ್ಲಿರುವ ಎಲ್ಲಾ ವಿವಿಗಳೂ ಸೇರಿ ವಾರ್ಷಿಕ 75 ಸಾವಿರ ಪದವೀಧರರನ್ನು ಮಾತ್ರ ಉತ್ಪಾದಿಸುತ್ತವೆ. ಈ ಕೊರತೆಯನ್ನು ತುಂಬಲು ಮಾಹಿತಿ ತಂತ್ರಜ್ಞಾನದ ಸೀಟುಗಳನ್ನು ಹೆಚ್ಚಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.
ಭಾರತೀಯ ಕಂಪ್ಯೂಟರ್ ತಜ್ಞರಿಗೆ ಅಮೆರಿಕಾದಲ್ಲಿ ಗೌರವವಿದೆ. ಫ್ರಾನ್ಸ್ , ಜಪಾನ್ ಮತ್ತು ಜರ್ಮನಿಗಳೂ ತಂತ್ರ ಜ್ಞಾನದಲ್ಲಿ ಮುಂದುವರೆದಿದ್ದರೂ ಭಾಷೆ ಅವರಿಗೆ ತೊಡಕಾಗಿದೆ ಎಂದು ಪರಮೇಶ್ವರ್ ಹೇಳಿದರು.
(ಮಂಗಳೂರು ಪ್ರತಿನಿಧಿಯಿಂದ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications