ದುರ್ಬಲ ಮುಂಗಾರು, ಕೆಲವೆಡೆ ಒಣಹವೆ
ಬೆಂಗಳೂರು : ರಾಜ್ಯದ ಒಳನಾಡಿನಲ್ಲಿ ಮುಂಗಾರು ದುರ್ಬಲವಾಗಿದೆ. ಆದಾಗ್ಯೂ ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಬಿದ್ದಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಕರ್ನಾಟಕದಲ್ಲಿ ಸಹ ಚದುರಿದಂತೆ ಮಳೆ ಆಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.
ಕಾರ್ಕಳದಲ್ಲಿ 2 ಸೆಂಟಿ ಮೀಟರ್, ಬಂಟ್ವಾಳ, ಮಂಕಿ, ಮೂಲ್ಕಿ, ಮಂಗಳೂರು ವಿಮಾನ ನಿಲ್ದಾಣ, ಆಗುಂಬೆಯಲ್ಲಿ ತಲಾ 1 ಸೆಂಟಿ ಮೀಟರ್ ಮಳೆ ಬಿದ್ದಿದೆ. ದಕ್ಷಿಣ ಒಳನಾಡಿನ ಕೆಲವೆಡೆ ತಾಪಮಾನ ಹೆಚ್ಚಿತ್ತು. ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಕೂಡ ತಾಪಮಾನದಲ್ಲಿ ಬದಲಾವಣೆ ಕಂಡು ಬಂತು.
ಕರಾವಳಿ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿತ್ತು. ಗುಲ್ಬರ್ಗಾದಲ್ಲಿ ದಿನದ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಬೀದರ್ನಲ್ಲಿ ರಾತ್ರಿಯ ಕನಿಷ್ಠ ಉಷ್ಣಾಂಶ 18.4 ಡಿಗ್ರಿ ಸೆಲ್ಸಿಯಸ್ ಇತ್ತು.
ಗುರುವಾರದವರೆಗಿನ ಮುನ್ಸೂಚನೆಯಂತೆ ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಸುರಿಮಳೆ ಬೀಳುವ ಸಾಧ್ಯತೆ ಇದೆ. ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇದ್ದು, ಹಗುರದಿಂದ ಮಳೆ ಬೀಳುವ ಸಾಧ್ಯತೆ ಇದೆ. ದಿನದ ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications