ಅಭಿವೃದ್ಧಿಯ ಹಾದಿಯ ರಾಯಚೂರಿಗೆ ಸೋನಿಯಾ ಹಸಿರು ನಿಶಾನೆ
ರಾಯಚೂರು : ಕೇವಲ 28 ತಿಂಗಳುಗಳ ದಾಖಲೆ ಅವಧಿಯಲ್ಲಿ ಪೂರ್ಣಗೊಳಿಸಲು ಉದ್ದೇಶಿಸಲಾಗಿರುವ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ 7ನೇ ಘಟಕದ ಕಾಮಗಾರಿಗಳ ಆರಂಭದ ಉದ್ಘಾಟನೆಯನ್ನು ಎಐಸಿಸಿ ಅಧ್ಯಕ್ಷೆ ಹಾಗೂ ಸಂಸತ್ ಸದಸ್ಯರಾದ ಸೋನಿಯಾ ಗಾಂಧಿ ಬುಧವಾರ ನೆರವೇರಿಸಿದರು.
ಕೇವಲ 28 ತಿಂಗಳ ಅಲ್ಪ ಕಾಲಮಿತಿಯಲ್ಲಿ ಈ ಯೋಜನೆಯನ್ನು ಪೂರ್ಣಗೊಳಿಸುವ ಸಂಕಲ್ಪ ಮಾಡಿರುವುದು ರಾಜ್ಯ ಸರಕಾರದ ಬದ್ಧತೆಯನ್ನು ತೋರುತ್ತದೆ ಎಂದು ಅವರು ಶ್ಲಾಘಿಸಿದರು. 210 ಮೆಗಾವ್ಯಾಟ್ ಸಾಮರ್ಥ್ಯದ ಈ 7ನೇ ಘಟಕ 640 ಕೋಟಿ ರುಪಾಯಿಗಳ ವೆಚ್ಚದಲ್ಲಿ ನಿರ್ಮಾಣವಾಗಿ ರಾಜ್ಯದ ವಿದ್ಯುತ್ ಬೇಡಿಕೆಯನ್ನು ಪೂರೈಸಲಿದೆ, ಇದು ವಿದ್ಯುತ್ ಉತ್ಪಾದನೆ ಹಾಗೂ ಸ್ವಾವಲಂಬನೆಯ ಹಾದಿಯಲ್ಲಿ ಇಟ್ಟ ದಾಪುಗಾಲು ಎಂದು ಅವರು ಬಣ್ಣಿಸಿದರು.
ಈ ಸ್ಥಾವರದ ಇತರ 6 ಘಟಕಗಳು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನಾರ್ಹ ಎಂದ ಅವರು, ರಾಜ್ಯ ಸರಕಾರ ಆಲಮಟ್ಟಿ ವಿದ್ಯುತ್‌ಯೋಜನೆಯನ್ನು ಕರ್ನಾಟಕ ವಿದ್ಯುತ್ ನಿಗಮಕ್ಕೆ ವಹಿಸಿಕೊಡಲು ಕರ್ನಾಟಕ ಸರಕಾರ ನಿರ್ಧಾರ ತೆಗೆದುಕೊಂಡಿದೆ ಎಂದರು.
ತ್ಯಾಗ : ದೇಶದ ಪ್ರಗತಿಯ ದೃಷ್ಟಿಯಿಂದ ಕೈಗೊಳ್ಳುವ ಇಂತಹ ಮಹತ್ವದ ಯೋಜನೆಗಳಿಗಾಗಿ ತಮ್ಮ ಹೊಲ, ಮನೆ, ಮಠಗಳನ್ನು ಬಿಟ್ಟುಕೊಡುವ ಜನರ ತ್ಯಾಗ ಅತ್ಯಂತ ದೊಡ್ಡದು ಎಂದು ಹೇಳಿದ ಸೋನಿಯಾ ಗಾಂಧಿ ಅವರು, ಈ ಜನರಿಗೆ ಸೂಕ್ತ ಪುನರ್ವಸತಿ ಹಾಗೂ ಪರಿಹಾರ ದೊರಕಬೇಕು ಎಂದರು.
ಆಸ್ಪತ್ರೆಯ ಅರ್ಪಣೆ : ಹೈದರಾಬಾದ್ ಕರ್ನಾಟಕ ಪ್ರದೇಶದ ಜನತೆಯ ಅನುಕೂಲಕ್ಕಾಗಿ ನಿರ್ಮಿಸಲಾಗಿರುವ 35 ಕೋಟಿ ರುಪಾಯಿ ವೆಚ್ಚದ ಅತ್ಯಾಧುನಿಕ ಹೈಟೆಕ್ ಅಸ್ಪತ್ರೆಯನ್ನು ರಾಜ್ಯಕ್ಕೆ ಅವರು ಸಮರ್ಪಿಸಿದರು. ಸರಣಿ ಕಾರ್ಯಕ್ರಮಗಳ ಈ ಸಂದರ್ಭದಲ್ಲಿ ಹಕ್ಕು ಪತ್ರಗಳನ್ನು ಸಹ ವಿತರಿಸಿದರು. ಅಂಬೇಡ್ಕರ್ ಭವನದ ಶಂಕುಸ್ಥಾಪನೆಯನ್ನೂ ನೆರವೇರಿಸಿದರು. ಸ್ತ್ರೀಶಕ್ತಿ ಕಾರ್ಯಕ್ರಮದ ಉದ್ಘಾಟನೆಯೂ ನಡೆಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೌಜಲಗಿ, ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಗೃಹಸಚಿವ ಮಲ್ಲಿಕಾರ್ಜುನ ಖರ್ಗೆ, ಸಚಿವರುಗಳಾದ ಧರ್ಮಸಿಂಗ್, ಎಚ್.ಕೆ. ಪಾಟೀಲ್, ವೀರಕುಮಾರ್ ಪಾಟೀಲ್, ಕಾಂಗ್ರೆಸ್ ವರಿಷ್ಠ ಗುಲಾಂ ನಬೀ ಆಜಾದ್, ಶಾಸಕರುಗಳು ಹಾಗೂ ಸಂಸದರು ಪಾಲ್ಗೊಂಡಿದ್ದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications