ಕೋರ್ಟ್ ಕಟ್ಟಡಗಳ ಪರಿಸ್ಥಿ-ತಿ : ವರದಿ- ನೀಡಲು ಹೈಕೋರ್ಟ್ ಆದೇಶ
ಬೆಂಗಳೂರು : ಕೋರ್ಟ್ ಕಟ್ಟಡಗಳ ಹಾಗೂ ಜಿಲ್ಲಾ ನ್ಯಾಯಲಯದ ವ್ಯಾಪ್ತಿಯಲ್ಲಿ ಬರುವ ಕೋರ್ಟ್ ಸಿಬ್ಬಂದಿಯ ವಸತಿಗೃಹಗಳ ಪ್ರಸ್ತುತ ಸ್ಥಿತಿಗತಿ ಕುರಿತು ವರದಿ ಸಲ್ಲಿಸುವಂತೆ ಎಲ್ಲ ಜಿಲ್ಲಾ ಕೋರ್ಟ್ ನ್ಯಾಯೋಶರಿಗೆ ಹೈಕೋರ್ಟ್ ಶುಕ್ರವಾರದಂದು ನಿರ್ದೇಶಿಸಿದೆ.
ಕೋರ್ಟಿಗೆ ಸಂಬಂಸಿದ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಂತೆ ಮತ್ತು ಜಿಲ್ಲಾ ನ್ಯಾಯಾಲಯಕ್ಕೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಾಜ್ಯಸರಕಾರಕ್ಕೆ ಆದೇಶಿಸಲು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ, -ಹಂ-ಗಾ-ಮಿ ಮುಖ್ಯ ನ್ಯಾಯಾಧೀಶ ಅಶೋಕ್ ಭಾನ್ ಮತ್ತು ನ್ಯಾಯಮೂರ್ತಿ ಆರ್. ಗುರುರಾಜನ್ ಅವರ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.
ಜಿಲ್ಲಾ ನ್ಯಾಯಲಯಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳು, ಸಿಬ್ಬಂದಿ ವರ್ಗ ಮತ್ತು ಅವರ ವಸತಿ ಗೃಹಗಳ ಕುರಿತು ವಿವರವಾದ ವರದಿ ನೀಡುವಂತೆ ಹೈಕೋರ್ಟ್ ಹೇಳಿದೆ. ಬೆಂಗಳೂರಿನ ವಕೀಲ ಎಸ್.ಎನ್. ಪ್ರಶಾಂತ್ ಚಂದ್ರ, ಎಂ. ಎಂ. ಮಂಕೀಕರ್ ಮತ್ತು ಡಾ. ಕೆ. ಇ. ನಾಗಭೂಷಣ್ ಹಾಗೂ ಕುಣಿಗಲ್ ವಕೀಲ ಕೃಷ್ಣ ರಾಜ್ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಸಿದ್ದರು. ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಪ್ರತಿಗಳನ್ನು ಪ್ರತೀ ಜಿಲ್ಲಾ ನ್ಯಾಯಾಲಯಗಳಿಗೆ ಕಳಿಸುವಂತೆ ಹೈಕೋರ್ಟ್‌ನ ಮುಖ್ಯ ರೆಜಿಸ್ಟ್ರಾರ್‌ಗೆ ಸೂಚಿಸಲಾಗಿದ್ದು ಮುಂದಿನ ವಿಚಾರಣೆಯನ್ನು ನವೆಂಬರ್ 23 ಕ್ಕೆ ಮುಂದೂಡಲಾಗಿದೆ.
ರಾಜ್ಯ ಸರಕಾರ ಮೂಲ ಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ. ಕೇಸುಗಳು ಬೇಗನೆ ಇತ್ಯರ್ಥವಾಗಬೇಕಾದರೆ ಮೂಲಭೂತ ಸೌಕರ್ಯಗಳೂ ಅಗತ್ಯ. ಹೊಸ ಜಿಲ್ಲೆಗಳಲ್ಲಿ ಕಟ್ಟಡಗಳು ಇಲ್ಲದೇ ಇರುವುದರಿಂದ ಜಿಲ್ಲಾ ನ್ಯಾಯಲಯಗಳ ರಚನೆಯಾಗಿಲ್ಲ . ಇರುವ ಕೋರ್ಟಿನಲ್ಲಿ ಸಿಬ್ಬಂದಿಗಳೂ ಸಾಕಷ್ಟು ಮಂದಿ ಇಲ್ಲ ಎಂದು ಅರ್ಜಿದಾರರು ಹೇಳಿದ್ದಾರೆ. ಕೇಂದ್ರ ಸರಕಾರ, ನ್ಯಾಯಾಲಯಕ್ಕೆ ಸಂಬಂಧಿಸಿದ ಯೋಜನೆಗಳನ್ನು ಕಾರ್ಯ ರೂಪಕ್ಕೆ ತರಲು ಹಣ ಮಂಜೂರು ಮಾಡಲು ತಯಾರಾಗಿದ್ದರೂ ರಾಜ್ಯ ಸರಕಾರ ಮುಂದೆ ಬರದೇ ಇರುವುದರಿಂದ ಎಲ್ಲಾ ಯೋಜನೆಗಳೂ ನೆನೆಗುದಿಗೆ ಬೀಳುತ್ತಿವೆ ಎಂದೂ ಅರ್ಜಿಯಲ್ಲಿ ಹೇಳಲಾಗಿದೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications