ದಿಢೀರ್ ಭೂಕುಸಿತ: 200 ಕುಟುಂಬಗಳ ಸ್ಥಳಾಂತರ ಸಂಭವ
ತುಮಕೂರು: ಜಿಲ್ಲೆಯ ಕಲ್ಲೂರಿನಲ್ಲಿ ದಿಢೀರ್ ಭೂಕುಸಿತ ಸಂಭವಿಸಿರುವ ಹಿನ್ನಲೆಯಲ್ಲಿ ಹಳ್ಳಿಯ 200 ಕುಟುಂಬಗಳನ್ನು ಸ್ಥಳಾಂತರಿಸಲು ಯೋಚಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಭೂಕುಸಿತದಿಂದ ಮನೆಗಳ ಗೋಡೆಗಳು ಬಿರುಕು ಬಿಟ್ಟಿದ್ದು, ಹಳ್ಳಿಯ ಎಲ್ಲಾ 200 ಕುಟುಂಬಗಳನ್ನೂ ಸ್ಥಳಾಂತರಿಸುವುದು ಸೂಕ್ತ ಎಂದು ಭೂವಿಜ್ಞಾನಿಗಳು ಸಲಹೆ ಮಾಡಿದ್ದಾರೆ. ಊರಿನ ಹೊರಭಾಗದಲ್ಲಿರುವ ನಾಲ್ಕು ಎಕರೆ ಖಾಸಗಿ ಜಾಗದಲ್ಲಿ ಸಂತ್ರಸ್ಥರಿಗೆ ಪುನರ್ವಸತಿ ಕಲ್ಪಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಅಧಿಕಾರಿಗಳು ಚರ್ಚಿಸುತ್ತಿದ್ದಾರೆ.
ಕಲ್ಲೂರಿನ ಸಂತ್ರಸ್ಥರಿಗೆ ಆಶ್ರಯ ಯೋಜನೆ ಮೂಲಕ ಮನೆ ನಿರ್ಮಿಸಿಕೊಡಲು ಯೋಚಿಸಲಾಗಿದ್ದು, ಪ್ರಕೃತಿ ವಿಕೋಪ ನಿಧಿಯಿಂದ ಹಣ ಬಿಡುಗಡೆ ಮಾಡಲು ಸಾಧ್ಯವಿಲ್ಲದ್ದರಿಂದ ಸರಕಾರಕ್ಕೆ ಪ್ರತ್ಯೇಕ ಪ್ರಸ್ತಾವನೆ ಸಲ್ಲಿಸಲಾಗಿದೆ. ಮನೆ ಕಳೆದುಕೊಳ್ಳುವ ಎಲ್ಲ ಕುಟುಂಬಗಳಿಗೆ ತಲಾ 10 ಸಾವಿರ ರುಪಾಯಿ ನೀಡುವಂತೆ ಪ್ರಭಾರ ಜಿಲ್ಲಾಧಿಕಾರಿ ಮಣಿವಣ್ಣನ್ ಶಫಾರಸು ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಮನೆಗಳಲ್ಲಿ ನೀರು : ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಲ್ಲರಿಗೂ ಸೂಚನೆ ನೀಡಿದ್ದರೂ ಹೋಗಲು ಯಾರೂ ಸಿದ್ಧರಿಲ್ಲ ಎಂದು ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಇಡೀ ಗ್ರಾಮದಲ್ಲಿ ನೇಕಾರರ ಕುಟುಂಬಗಳೇ ಅಧಿಕವಾಗಿದ್ದು, ಮನೆಗಳು ಬಿರುಕುಬಿಟ್ಟಿರುವುದರಿಂದ ವಾಸಕ್ಕೆ ಯೋಗ್ಯವಾಗಿಲ್ಲ. ಈ ನಡುವೆ ಸತತ ಮಳೆಯಿಂದ ಕಲ್ಲೂರು ಕೆರೆ ಕೋಡಿ ಹೋಗುತ್ತಿದ್ದು, ಅಂತರ್ಜಲ ಮಟ್ಟ ಹೆಚ್ಚಿದೆ. ನೇಕಾರರು ಮನೆಗಳಲ್ಲಿ ನೆಯ್ಗೆ ಕೆಲಸ ಮಾಡಲು ತೆಗೆದಿದ್ದ ಗುಂಡಿಗಳು ನೀರಿನಿಂದ ತುಂಬಿವೆ.
(ಇನ್ಫೋ ವರದಿ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications