ವಿಶ್ವಬ್ಯಾಂಕ್ ನೆರವಿನ ಕೆರೆಗಳ ಅಭಿವೃದ್ಧಿ ಯೋಜನೆಗೆ ಕೇಂದ್ರ ಅಸ್ತು
ಬೆಂಗಳೂರು : ವಿಶ್ವಬ್ಯಾಂಕ್ ನೆರವಿನೊಂದಿಗೆ ರಾಜ್ಯಗಳ ಕೆರೆಗಳ ಅಭಿವೃದ್ಧಿಗೆ ರೂಪಿಸಲಾಗಿರುವ ಯೋಜನೆಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಕೆರೆಗಳ ಹೂಳೆತ್ತುವ ವಿಷಯ ಕುರಿತು ಮಂಗಳವಾರ ಸದನದಲ್ಲಿ ರೋಣ ಕ್ಷೇತ್ರದ ಶಾಸಕ ಗುರುಪಾದಗೌಡ ಕೇಳಿದ ಪ್ರಶ್ನೆಗೆ, ಸಣ್ಣ ನೀರಾವರಿ ಸಚಿವ ಕುಮಾರ್ ಬಂಗಾರಪ್ಪ ಉತ್ತರಿಸುತ್ತಿದ್ದಾಗ ಜನತಾದಳ (ಯು)ದ ನಾಯಕ ಬೈರೇಗೌಡ ಕೇಳಿದ ಪ್ರಶ್ನೆಗೆ ಮಧ್ಯ ಪ್ರವೇಶಿದ ಕೃಷ್ಣ ಈ ವಿಷಯ ತಿಳಿಸಿದರು.
ನೆರವು ನೀಡವ ಸಂಬಂಧ ವಿಶ್ವಬ್ಯಾಂಕ್ ಅಧಿಕಾರಿಗಳ ತಂಡ ಈಗಾಗಲೇ ರಾಜ್ಯಕ್ಕೆ ಭೇಟಿ ನೀಡಿದೆ. ನೆರವು ಮಾರ್ಚ್ ವೇಳೆಗೆ ಲಭ್ಯವಾಗಲಿದೆ. ಯೋಜನೆಯಡಿ ರಾಜ್ಯದ 40 ಸಾವಿರ ಕೆರೆಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು. ವಿಶ್ವಬ್ಯಾಂಕ್ ಹಣ ಮಂಜೂರಾಗುವುದು ತಡವಾಗುವ ಹಿನ್ನೆಲೆಯಲ್ಲಿ ಯೋಜನೆ ಕೈಗೆತ್ತಿಕೊಳ್ಳಲು ಹುಡ್ಕೋದಿಂದ 200 ಕೋಟಿ ರುಪಾಯಿ ನೆರವಿಗೆ ಯತ್ನಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಶಾಸಕರ ನಿಧಿ : ಸ್ಥಳೀಯ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರ ನಿಧಿ ಸ್ಥಾಪಿಸುವ ಸಂಬಂಧ ಪ್ರಸ್ತುತ ಅಧಿವೇಶನದಲ್ಲೇ ಸರಕಾರ ನಿರ್ಧಾರ ಪ್ರಕಟಿಸುವುದೆಂದು ಕೃಷ್ಣ ತಿಳಿಸಿದ್ದಾರೆ. ಮಂಗಳವಾರ ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಈ ವಿಷಯ ಪ್ರಕಟಿಸಿದ್ದಾರೆ ಎಂದು ಶಾಸಕಾಂಗ ಪಕ್ಷದ ಕಾರ್ಯದರ್ಶಿ ಕರಿಯಣ್ಣ ತಿಳಿಸಿದ್ದಾರೆ.
ಸಂಸದರಿಗಿರುವಂತೆ ತಮಗೂ ಸ್ಥಳೀಯ ಅಭಿವೃದ್ಧಿ ಕಾರ್ಯಗಳಿಗಾಗಿ ಶಾಸಕರ ನಿಧಿ ಸ್ಥಾಪಿಸಬೇಕೆಂದು ಶಾಸಕರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು. ಸರಕಾರದ ನಿರ್ಧಾರಕ್ಕೆ ಪಕ್ಷದ ಶಾಸಕರು ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications