ಸ್ವಯಂ ಆಸ್ತಿ ತೆರಿಗೆ ಪಾವತಿ ಕಾಲಾವಧಿ ವಿಸ್ತರಣೆ
ಬೆಂಗಳೂರು : ಸಾರ್ವಜನಿಕರ ಒತ್ತಾಯದ ಮೇರೆಗೆ ಬೆಂಗಳೂರು ಮಹಾನಗರಪಾಲಿಕೆಯ ಆಸ್ತಿ ತೆರಿಗೆ ಪಾವತಿ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಮೇಯರ್ ರಾಮಚಂದ್ರಪ್ಪ ತಿಳಿಸಿದ್ದಾರೆ.
ದಿನಾಂಕವನ್ನು ನವೆಂಬರ್ ಒಂದರಿಂದ 30 ದಿನಗಳ ಕಾಲ ವಿಸ್ತರಿಸಲಾಗಿದ್ದು, ಈ ಸಂಬಂಧ ಪುಸ್ತಕಗಳನ್ನು ಮರುಮುದ್ರಣ ಮಾಡಲಾಗುತ್ತಿದೆ. ಪುಸ್ತಕಗಳು ನಾಗರಿಕರಿಗೆ ನವೆಂಬರ್ ಒಂದರಿಂದ ದೊರೆಯಲಿವೆ. ಸಂಬಂಧಿಸಿದವರು ಆಯಾ ಪ್ರದೇಶದ ಕಂದಾಯಾಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಅವರು ತಿಳಿಸಿದ್ದಾರೆ.
ತೆರಿಗೆ ಪದ್ಧತಿ ಗೊಂದಲ : ಈ ಪದ್ಧತಿಯನ್ನು ವಿರೋಧಿಸಿ ಕನ್ನಡ ಚಳುವಳಿ ಕೇಂದ್ರ ಕೂಟದ ಸದಸ್ಯರಾದ ವಿಶ್ವನಾಥ್, ದೇವನಾಥ್, ಲಕ್ಷ್ಮೀನಾರಾಯಣ ಅವರು ಮೇಯರ್ ರಾಮಚಂದ್ರಪ್ಪ ಮತ್ತು ಆಯುಕ್ತ ಜೈರಾಜ್ ಅವರತ್ತ ಕರಪತ್ರಗಳನ್ನು ಎಸೆದು ಮಾಸಿಕ ಸಭೆಯಲ್ಲಿ ಗೊಂದಲ ಎಬ್ಬಿಸಿದ ಘಟನೆ ಬುಧವಾರ ನಡೆಯಿತು.
ಸದಸ್ಯರ ವರ್ತನೆಯಿಂದ ಸಭೆಯನ್ನು ಮುಂದೂಡಲಾಯಿತು. ಘೋಷಣೆ ಕೂಗಿದ ಸದಸ್ಯರನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಯಿತೆಂದು ನಂತರ ರಾಮಚಂದ್ರಪ್ಪ ತಿಳಿಸಿದ್ದಾರೆ.
ಮಾರಾಮಾರಿ : ನಗರಪಾಲಿಕೆ ಜಾರಿಗೆ ತಂದಿರುವ ವಾಹನ ನಿಲುಗಡೆ ಶುಲ್ಕ ವ್ಯವಸ್ಥೆ ವಿರೋಧಿಸಿ ಬಿಜೆಪಿ ಸದಸ್ಯರು ಸಭೆ ಆರಂಭದಲ್ಲಿ ಧರಣಿ ಕುಳಿತಿದ್ದನ್ನು ಕಾಂಗ್ರೆಸ್ ಶಾಸಕರು ವಿರೋಧಿಸಿದರು. ಆಗ ಆಡಳಿತ ಪಕ್ಷವಾದ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಮಾತಿನ ಚಕಮುಕಿ ವಿಕೋಪಕ್ಕೆ ತಿರುಗಿ ಕೈಕೈ ಮಿಲಾಯಿಸಿ ಮಾರಾಮಾರಿಗೆ ಇಳಿದರು.
ಬಿಜೆಪಿ ಪೆಟ್ರೋಲ್ ಬೆಲೆ ಏರಿಸಿ ಜನರಿಗೆ ತೊಂದರೆ ಉಂಟು ಮಾಡಿರುವಾಗ ವಾಹನ ಶುಲ್ಕದಂತಹ ಚಿಕ್ಕ ವಿಷಯವಾಗಿ ಧರಣಿ ನಡೆಸುವುದು ಸರಿಯಲ್ಲ ಎಂದು ಕಾಂಗ್ರೆಸ್ ಸದಸ್ಯರು ಆಕ್ಷೇಪಿಸಿದಾಗಿ ಗೊಂದಲ ಪ್ರಾರಂಭವಾಯಿತು.
(ಇನ್ಫೋ ವರದಿ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications