ಬಹುತೇಕ ರಾಜ್ಯದೆಲ್ಲೆಡೆ ಒಣಹವೆ
ಬೆಂಗಳೂರು : ಬೆಂಗಳೂರಿನಲ್ಲಿ ಬುಧವಾರ ಆಕಾಶ ಶುಭ್ರವಾಗಿತ್ತು. ಮೋಡಗಳ ತಿಕ್ಕಾಟವೂ ಇರಲಿಲ್ಲ. ಗುಡುಗಿನ ಆರ್ಭಟವೂ ಇರಲಿಲ್ಲ. ಆದರೆ, ಗುಡುಗು ಸಿಡಿಲನ್ನೂ ಮೀರಿಸುವ ಪಟಾಕಿಯ ಆರ್ಭಟ ಎಲ್ಲೆಡೆ ಆಗಲೇ ಆರಂಭವಾಗಿದೆ. ಇನ್ನು ಮೂರು ದಿನ ಆಟಂಬಾಂಬ್, ಲಕ್ಷ್ಮೀ ಪಟಾಕಿ, ಆನೆ ಪಟಾಕಿಗಳು ಕಿವಿಗಡಚಿಕ್ಕುವಂತೆ ಸಿಡಿಯುತ್ತಲೇ ಇರುತ್ತವೆ.
ಬುಧವಾರವಂತೂ ಬೆಂಗಳೂರಲ್ಲಿ ಸೊಗಸಾದ ಹಾಗೂ ಹಿತವಾದ ಬಿಸಿಲಿನ ಅನುಭವ. ಮಕ್ಕಳಿಗಂತೂ ಖುಷಿಯೋ ಖುಷಿ. ಅಪ್ಪ ತಂದ ಪಟಾಕಿಯನ್ನು ಶಾಲೆಗೆ ಹೋಗುವ ಮೊದಲೆ ಕೆಲವು ಮಕ್ಕಳು ಹಚ್ಚಿ ಆನಂದಿಸಿದರು. ಗುರುವಾರವೂ ಬೆಂಗಳೂರಿನಲ್ಲಿ ಮಳೆ ಬೀಳುವುದಿಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ. ಗುರುವಾರ ಬೆಂಗಳೂರಿನಲ್ಲಿ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಲುಪುವ ಸೂಚನೆ ಇದೆ. ಅಂದರೆ, ಹಣತೆಗಳ ಹಚ್ಚಿ, ಪಟಾಕಿ ಸಿಡಿಸಲು ಮಳೆರಾಯನ ಕಾಟವಿಲ್ಲ ಎಂದು ಹೇಳಬಹುದು.
ಈ ಮಧ್ಯೆ ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದೆ. ಮೂರ್ನಾಲ್ಕು ದಿನ ಬಿಡದೆ ಸುರಿದ ಮಳೆರಾಯ ಬಿಡುವು ಪಡೆದು ವಿಶ್ರಾಂತಿ ಪಡೆಯುತ್ತಿದ್ದಾನೆ. ಹೀಗಾಗಿ ಕರಾವಳಿಯಲ್ಲಿ ಒಣಹವೆ ಮೂಡಿತ್ತು. ಒಳನಾಡಿನಲ್ಲೂ ಒಣಹವೆಯದೇ ಕಾರುಭಾರು. ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತಲೂ ಹೆಚ್ಚಾಗಿತ್ತು. ಗುಲ್ಬರ್ಗಾದಲ್ಲಿ ದಿನದ ಅತಿಹೆಚ್ಚು ತಾಪಮಾನ 34.4 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ ಮಂಡ್ಯದಲ್ಲಿ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಏನೂ ಕಂಡುಬರುವುದಿಲ್ಲ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications