ಹೊಗೆಯಾವರಿಸಿದ ಮುಗಿಲಲ್ಲಿ ಮಳೆಯಿಲ್ಲ
ಬೆಂಗಳೂರು : ಬೆಂಗಳೂರಿನಲ್ಲಿ ಬಿಸಿಲು ಚುರ್ ಎನ್ನುತ್ತಿದೆ. ಆದರೂ, ಹಿತವಾಗಿದೆ. ಮಳೆಯಿಲ್ಲ. ಮೋಡವಿಲ್ಲ. ಮುಗಿಲನ್ನೆಲ್ಲಾ ಪಟಾಕಿಯ ಹೊಗೆಯೇ ಆವರಿಸಿದೆ. ನಕ್ಷತ್ರಗಳನ್ನು ನಾಚಿಸುವಂತೆ ರ್ಯಾಕೆಟ್‌ಗಳು ಮೇಲೇರಿ ಮಿನುಗಿ, ಸಿಡಿಯುತ್ತಿವೆ. ಹೇಳಿ ಕೇಳಿ ಅಮಾವಾಸ್ಯೆ ಆದ್ದರಿಂದ ಹೊಸ ಬಟ್ಟೆ ತೊಟ್ಟು ಬಿರುಸಿನ ಕುಡಿಕೆಗಳ ಹಚ್ಚುತ್ತಾ ಆನಂದಿಸುತ್ತಿರುವ ಮಕ್ಕಳ ಮುದ್ದು ಮುಖದೆದುರು ಚಂದ್ರ ಮರೆಯಾಗಿದ್ದಾನೆ.
ರಾಜ್ಯದೆಲ್ಲೆಡೆ ಬಹುತೇಕ ಒಣಹವೆ ಇದೆ. ಕರಾವಳಿ ಹಾಗೂ ಒಳನಾಡಿನಲ್ಲಿ ಒಣಹವೆ ಕಂಡುಬಂದಿದೆ. ಉತ್ತರ ಒಳನಾಡಿನಲ್ಲಿ ದಿನದ ಗರಿಷ್ಠ ಉಷ್ಣಾಂಶದಲ್ಲಿ ಅಲ್ಪ ಪ್ರಮಾಣದ ಏರಿಕೆ ಕಂಡುಬಂದಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಅನೇಕ ಕಡೆಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತಲೂ ಹೆಚ್ಚಾಗಿತ್ತು. ಬೀದರ್ ಹಾಗೂ ಗುಲ್ಬರ್ಗಾದಲ್ಲಿ ದಿನದ ಗರಿಷ್ಠ ತಾಪಮಾನ 34ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಕನಿಷ್ಠ ಉಷ್ಣಾಂಶ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 16.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುನ್ಸೂಚನೆಯಂತೆ ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಅವಧಿಯಲ್ಲಿ ಒಣಹವೆ ಮುಂದುವರಿಯಲಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ನಿರ್ಮಲ ಆಕಾಶವಿದ್ದು, ತಾಪಮಾನ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ.
ಮೊನ್ನೆಯಷ್ಟೇ ಬೆಳ್ಳಂದೂರು ಕೆರೆಯಲ್ಲಿ ಹಿಮವತ್ಪರ್ವತದಂತೆ ಬುಗಿಲೆದ್ದಿದ್ದ ಬೆಳ್ನೊರೆ ಪರಿಸರ ಮಾಲಿನ್ಯಕ್ಕೆ ತನ್ನ ಕೊಡುಗೆಯನ್ನೂ ನೀಡದಂತೆ, ಪಟಾಕಿಯ ಹೊಗೆ ಕೂಡ ತನ್ನ ಕೈಲಾದಷ್ಟು ಮಟ್ಟಿಗೆ ವಾಯುಮಾಲಿನ್ಯ ಉಂಟುಮಾಡಿದೆ. ಪಟಾಕಿಯ ಹೊಗೆಯಿಂದ ಅಸ್ತಮಾ ರೋಗಿಗಳು, ಕೆಮ್ಮಿ ಕೆಮ್ಮಿ ಸುಸ್ತಾಗಿದ್ದಾರೆ. ಔಷಧಾಲಯಗಳ ಮುಂದೆ, ವೈದ್ಯರೆದುರು ಈಗಲೂ ಕೆಮ್ಮುತ್ತಾ ನಿಂತಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications