ಮಂಗಳೂರಿನಲ್ಲಿ 3 ಸೆಂ.ಮೀ. ಮಳೆ
ಬೆಂಗಳೂರು : ಶನಿವಾರ ಮತ್ತೆ ಬಂಗಾಳಕೊಲ್ಲಿಯನ್ನು ಅಪ್ಪಳಿಸಲಿರುವ ಚಂಡಮಾರುತದ ಭೀತಿಯ ಹಿನ್ನೆಲೆಯಲ್ಲಿ ಕೆಳದಂಡೆಯ ಪ್ರದೇಶಗಳ ಸಾವಿರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸುವ ಕಾರ್ಯವನ್ನು ಪಶ್ಚಿಮ ಬಂಗಾಳ ಸರಕಾರ ಕೈಗೊಂಡಿದೆ.
ಕರಾವಳಿ ಜಿಲ್ಲೆಗಳಾದ ಮಿಡ್ನಾಪುರ, ಉತ್ತರ ಹಾಗೂ ದಕ್ಷಿಣ 24 ಪರಗಣಗಳೇ ಅಲ್ಲದೆ ಹೌರಾ ಹಾಗೂ ಹೂಗ್ಲಿ ಪ್ರದೇಶಗಳಲ್ಲಿ ಎಚ್ಚರಿಕೆಯ ಗಂಟೆ ಮೊಳಗಿದೆ. ಈ ತುರ್ತುಸ್ಥಿತಿಯನ್ನು ಎದುರಿಸಲು ಸರಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಇತ್ತ ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಶಾಂತನಾಗಿದ್ದ ಮಳೆರಾಯ ಶುಕ್ರವಾರ ಮತ್ತೆ ಕಾರ್ಯಪ್ರವೃತ್ತನಾಗಿದ್ದಾನೆ. ರಾಜ್ಯದ ಕರಾವಳಿಯ ಕೆಲವೆಡೆ ಮಳೆ ಬಿದ್ದಿದೆ. ಉಳಿದಂತೆ ರಾಜ್ಯಾದ್ಯಂತ ಒಣಹವೆ ಮುಂದುವರಿದಿದೆ. ಮಂಗಳೂರಿನಲ್ಲಿ 3 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ 2, ಪಣಂಬೂರಿನಲ್ಲಿ 1 ಸೆಂಟಿ ಮೀಟರ್ ಮಳೆ ಆಗಿದೆ. ದಿನದ ಗರಿಷ್ಠ ಉಷ್ಣಾಂಶ ರಾಜ್ಯದ ಬಹುತೇಕ ಕಡೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಾಗಿತ್ತು. ರಾಯಚೂರಿನಲ್ಲಿ ದಿನದ ಗರಿಷ್ಠ ಉಷ್ಣಾಂಶ 34ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ ಗುಲ್ಬರ್ಗಾದಲ್ಲಿ 14.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುನ್ಸೂಚನೆಯಂತೆ ಮುಂದಿನ 48 ಗಂಟೆಗಳ ಅವಧಿಯಲ್ಲಿ ರಾಜ್ಯದ ಕೆಲವೆಡೆ ಮಳೆ ಬೀಳುವ ಸಂಭವ ಇದೆ. ಸ್ಥಳೀಯ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ಒಂದೆರಡು ಕಡೆ ಹಗುರದಿಂದ ಮಳೆ ಬೀಳುವ ಸಾಧ್ಯತೆ ಇದೆ. ದಿನದ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ 31ಡಿಗ್ರಿ ಸೆಲ್ಸಿಯಸ್ ಹಾಗೂ 18 ಡಿಗ್ರಿ ಸೆಲ್ಸಿಯಸ್ ಇರುವ ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications