ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗದಲ್ಲಿ ಅತಿ ಹೆಚ್ಚು ತಾಪಮಾನ

By Staff
|
Google Oneindia Kannada News

ಬೆಂಗಳೂರು : ರಾಜ್ಯದ ಬಹುತೇಕ ಎಲ್ಲೆಡೆ ಒಣಹವೆ ಇದೆ. ಪ್ರವಾಹ ಪ್ರಕೋಪಗಳೆಲ್ಲವೂ ತಣ್ಣಗಾಗಿವೆ. ದಿನದ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್‌ ಶಿವಮೊಗ್ಗದಲ್ಲಿ ದಾಖಲಾಗಿದೆ. ಅಂತೆಯೇ ರಾತ್ರಿಯ ಕನಿಷ್ಠ ಉಷ್ಣಾಂಶ 17.6 ಡಿಗ್ರಿ ಸೆಲ್ಸಿಯಸ್‌ ಮಂಡ್ಯದಲ್ಲಿ ದಾಖಲಾಗಿದೆ.

ಉಳಿದಂತೆ ರಾಜ್ಯದ ಕೆಲೆವೆಡೆಗಳಲ್ಲಿ ಕನಿಷ್ಠ ಉಷ್ಣಾಂಶದಲ್ಲಿ ಸ್ವಲ್ಪ ಏರು ಪೇರಾಗಿದೆ. ಉತ್ತರ ಒಳನಾಡಿನಲ್ಲಿ ಹಾಗೂ ಕರಾವಳಿಯ ಕೆಲವು ಪ್ರದೇಶಗಳಲ್ಲಿ ಸಹ ಕನಿಷ್ಠ ಉಷ್ಣಾಂಶದಲ್ಲಿ ಬದಲಾವಣೆ ಕಂಡುಬಂದಿದೆ. ಮುಂದಿನ 48 ಗಂಟೆಗಳ ಮುನ್ಸೂಚನೆಯಂತೆ ದಕ್ಷಿಣ ಒಳನಾಡಿನ ಕೆಲವೆಡೆ ಚದುರಿದಂತೆ ಮಳೆ ಬೀಳುವ ಸಂಭವ ಇದೆ. ಉಳಿದಂತೆ ಒಣ ಹವೆ ಮುಂದುವರಿಯಲಿದೆ. ಸ್ಥಳೀಯ ಹವಾಮಾನ ಮುನ್ಸೂಚನೆಯ ರೀತ್ಯ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಮುಸುಕಿದ ವಾತಾವರಣ ಇದ್ದು, ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌ ತಲುಪುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X