ಅವ್ಯವಹಾರ: ಬಾಗಿಲು ಮುಚ್ಚಿದಎಂಎಸ್‌ಐಎಲ್ ಲಂಡನ್ ಕಚೇರಿ
ಬೆಂಗಳೂರು : ಕರ್ನಾಟಕ ಸರಕಾರದ ಒಡೆತನದ ದಿ. ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ (ಎಂ.ಎಸ್.ಐ.ಎಲ್) ನ ಲಂಡನ್ ಕಚೇರಿಯನ್ನು ಮುಚ್ಚಲಾಗಿದೆ. ಈ ಕಚೇರಿಯಲ್ಲಿ ಅವ್ಯವಹಾರ ತಾಂಡವವಾಡುತ್ತಿದ್ದರಿಂದ ಇತ್ತೀಚೆಗೆ ಕಚೇರಿಯನ್ನು ಮುಚ್ಚಲಾಯಿತು ಎಂದು ಬೃಹತ್ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.
ಲಂಡನ್ ಎಂಎಸ್‌ಐಎಲ್ ಕಚೇರಿ ಅಧಿಕಾರಿಗಳ ಕರ್ತವ್ಯ ಲೋಪದಿಂದಾಗಿ ಸಂಸ್ಥೆ ಭಾರಿ ನಷ್ಟ ಅನುಭವಿಸಿದೆ ಎಂದು ಮಂಗಳವಾರ ವಿಧಾನಸಭೆಯಲ್ಲಿ ಅವರು ತಿಳಿಸಿದರು. ಲಂಡನ್ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರೆಡ್ಡಿ ಎಂಬ ಅಧಿಕಾರಿಯನ್ನು ಸೇವೆಯಿಂದ ಅಮಾನತು ಗೊಳಿಸಲಾಗಿದೆ. ಆ ಅಧಿಕಾರಿ ರಫ್ತುದಾರರ ಜತೆ ಷಾಮೀಲಾಗಿ ಸಂಸ್ಥೆಗೆ ಭಾರಿ ನಷ್ಟ ಉಂಟು ಮಾಡಿದ್ದಾರೆ ಎಂದು ಸಚಿವರು ತಿಳಿಸಿದರು.
ಈಗ ಅಮಾನತುಗೊಂಡಿರುವ ಆ ಅಧಿಕಾರಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿದೆ ಎಂದು ಪ್ರಶ್ನೋತ್ತರ ಅವಧಿಯಲ್ಲಿ ದೇಶಪಾಂಡೆ ತಿಳಿಸಿದರು. ಎಂಎಸ್‌ಐಎಲ್ ಸಂಸ್ಥೆ ಜೆಕೋಸ್ಲೋವಾಕಿಯಾದ ಮೆಸರ್ಸ್ ರೆಡ್ಡಿ ಎಸ್.ಆರ್.ಓ. ಪ್ರಾಗ್ ಕಂಪನಿಗೆ 1992ರಲ್ಲಿ ಸುಮಾರು 75 ಲಕ್ಷ ರುಪಾಯಿಯಷ್ಟು ಎಂಎಸ್‌ಐಎಲ್ ಉತ್ಪನ್ನಗಳನ್ನು ರಫ್ತು ಮಾಡಿತ್ತು, ಆದರೆ ಸಂಸ್ಥೆಗೆ ಕೇವಲ 37 ಲಕ್ಷ ರುಪಾಯಿಗಳು ಮಾತ್ರ ಸಂದಾಯವಾಗಿದೆ. ಎಂಎಸ್‌ಐಎಲ್‌ನಿಂದ ಸರಕು ಪಡೆದ ವ್ಯಕ್ತಿಯ ಹೆಸರೂ ರೆಡ್ಡಿ. ಅವರು ಈಗ ದಿವಾಳಿಯಾಗಿದ್ದಾರೆ ಎಂದು ಅಲ್ಲಿನ ನ್ಯಾಯಾಲಯ ಘೋಷಿಸಿದೆ ಇದರಿಂದ ಉಳಿದ ಹಣ ಸಂಸ್ಥೆಗೆ ಬಂದಿಲ್ಲ ಎಂದು ಸಚಿವರು ತಿಳಿಸಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications