-15 -ಐ-ಎ-ಎ-ಸ್-/ಐ-ಪಿ-ಎ-ಸ್ ಅಧಿಕಾರಿಗಳಿಗೆ ರಾಜ್ಯೋತ್ಸವದ ಕೊಡುಗೆಯಾಗಿ ವರ್ಗ
ಬೆಂಗಳೂರು : ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಕೆ. ಜೈರಾಜ್ ಸೇರಿದಂತೆ 16 ಐಎಎಸ್, ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.
ಜೈರಾಜ್ ಅವರನ್ನು ಕರ್ನಾಟಕ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ. ಜೈರಾಜ್ ಅವರ ಸ್ಥಾನಕ್ಕೆ ಶಂತನು ಕಾನ್‌ಸುಲ್ ಬರಲಿದ್ದಾರೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕೆ.ಪಿ. ಪಾಂಡೆ ಅವ-ರ-ನ್ನು ಇಂಧನ ಇಲಾಖೆಯ ಪ್ರಧಾನ ಕಾರ್ಯದರ್ಶಿಯ-ನ್ನಾ-ಗಿ, ಕರ್ನಾಟಕ ನಗರ ಮೂಲಭೂತ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ರಾಗಿದ್ದ ಗೋಕುಲರಾಂರನ್ನು ಅರಣ್ಯ ಹಾಗೂ ಪರಿಸರ ಇಲಾಖೆಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಜಿ.ಕೆ. ಲೋಖರೆ- ಗುಲ್ಬರ್ಗ ವಿಭಾಗಾಧಿಕಾರಿಯಾಗಿ, ಶಿವಮೊಗ್ಗಾ ಜಿಲ್ಲಾಧಿಕಾರಿ ಪಿ.ಎನ್. ಶ್ರೀನಿವಾಸಾಚಾರಿ ಅವರನ್ನು ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಯನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
ಮಂಡ್ಯ ಜಿಲ್ಲಾ ಎಸ್.ಪಿ.ಯಾಗಿ ಸಿಓಡಿಯ ಆನಂದ್ ಪೂಜಾರ್ ಅವರನ್ನು ಸೋಮವಾರ ನೇಮಿಸಲಾಗಿತ್ತು. ಆದರೆ 24 ಗಂಟೆಗಳೊಳಗೆ ಅವರ ಆದೇಶ ರದ್ದಾಗಿ ಅಮರ ಕುಮಾರ ಪಾಂಡೆ ಮಂಡ್ಯ ಜಿಲ್ಲಾ ಎಸ್.ಪಿಯಾಗಿ ನೇಮಕವಾಗಿದ್ದಾರೆ.
ಕರ್ನಾಟಕ ನಗರ ಮೂಲಭೂತ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಎನ್. ವಿಶ್ವನಾಥನ್, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್‌ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಎಸ್.ಎಂ. ಆಚಾರ್ಯ, ಮೈಸೂರು ಮಿನರಲ್ಸ್ ಲಿಮಿಟೆಡ್‌ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ವಿ. ಗೋವಿಂದರಾಜ್ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಪಿ. ಕೋಟಿಲಿಂಗನ ಗೌಡ ಅವರನ್ನು ನೇಮಿಸಲಾಗಿದೆ.
ಎಂ. ಎನ್. ವಿಜಯಕುಮಾರ್- ಇಂಧನ ಇಲಾಖೆಯಲ್ಲಿ ಸರಕಾರದ ವಿಶೇಷ ಕಾರ್ಯದರ್ಶಿಯಾಗಿ, ಸಿ. ಚಿಕ್ಕಣ್ಣ- ಕಂದಾಯ ಇಲಾಖೆಯಲ್ಲಿ ಸರಕಾರದ ಕಾರ್ಯದರ್ಶಿ, ಟಿ.ವೈ.ನಯಾಜ್ ಅಹ್ಮದ್ -ಸಹಕಾರ ಸಂಘಗಳ ರಿಜಿಸ್ಟ್ರಾರ್, ಸಂಜೀವಕುಮಾರ್ ಕೆಟಿಸಿಎಲ್ ನಿರ್ದೇಶಕ, ಪಿ. ಗಣೇಶ್- ಶಿಮೊಗ್ಗ ಜಿಲ್ಲಾಧಿಕಾರಿ, ಎಸ್. ಎಲ್. ಗಂಗಾಧರಪ್ಪ- ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಹಾವೇರಿ ಎಸ್ಪಿ- ಎಂ.ಎಫ್. ಪಾಷಾ, ಬೆಳಗಾವಿ ಎಸ್.ಪಿ.ಯಾಗಿ ಬಿ. ದಯಾನಂದ ಹಾಗೂ ಬಿಜಾಪುರ ಜಿಲ್ಲಾ ಎಸ್ಪಿಯಾಗಿ ಕೆ.ಎಸ್. ಆರ್. ಚರಣರೆಡ್ಡಿ ಅವರನ್ನು ನೇಮಿಸಲಾಗಿದೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications