ಏಕರೂಪದ ತೆರಿಗೆ ನೀತಿಗೆ ಜಪಾನಿ ನಿಯೋಗ ಮನವಿ
* ಇಮ್ರಾನ್ ಖುರೇಷಿ
ಬೆಂಗಳೂರು : ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಗುರುವಾರ ಭೇಟಿಯಾದ ಜಪಾನಿನ ಉನ್ನತ ಮಟ್ಟದ ವಾಣಿಜ್ಯ ನಿಯೋಗ, ಭಾರತದ ಐಟಿ ಕ್ಷೇತ್ರದಲ್ಲಿ ಜಪಾನಿನ ಬಂಡವಾಳವನ್ನು ಪ್ರೋತ್ಸಾಹಿಸಲು, ಎಲ್ಲಾ ರಾಜ್ಯಗಳೂ ಏಕರೂಪದ ತೆರಿಗೆ ನೀತಿಯನ್ನು ಅಳವಡಿಸಿಕೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ಸಲಹೆ ನೀಡಿತು.
ಅಕ್ಟ್ರಾಯ್‌ನಂತಹ ತೆರಿಗೆ ನೀತಿಗಳಲ್ಲಿ ಎಲ್ಲಾ ರಾಜ್ಯಗಳು ಒಮ್ಮತದ ನೀತಿ ಅನುಸರಿಸುವುದು ಅಗತ್ಯ ಎಂದು ನಿಯೋಗದ ಭೇಟಿಯ ಸಮಯದಲ್ಲಿ ಕೃಷ್ಣ ಅವರಿಗೆ ತಿಳಿಸಿರುವ ಸೋನಿ ಕಾರ್ಪೊರೇಷನ್‌ನ ಅಧ್ಯಕ್ಷ ಜೆ. ಐಕೊ, ಮುಂದಿನ ಸಾರಿ ಈ ಬಗ್ಗೆ ಚರ್ಚಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಐಕೊ ಅವರ ಸಲಹೆ ಉತ್ತಮವಾಗಿದೆ ಎಂದು ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಕೃಷ್ಣ ಅವರು, ಏಕರೂಪದ ಮಾರಾಟ ತೆರಿಗೆ ಪದ್ಧತಿಯನ್ನು ರೂಪಿಸಲು ನಾವು ಪ್ರಯತ್ನ ನಡೆಸುತ್ತಿದ್ದೇವೆ, ಕೆಲವು ವಸ್ತುಗಳನ್ನು ಹೊರತು ಪಡಿಸಿದರೆ ಉಳಿದಂತೆ ತೆರಿಗೆಯ ದರ ಎಲ್ಲಾ ರಾಜ್ಯಗಳಲ್ಲೂ ಏಕರೂಪವಾಗಿದೆ ಎಂದು ಹೇಳಿದ್ದಾರೆ. ಭೇಟಿಯ ಸಮಯದಲ್ಲಿ ಭಾರತದಲ್ಲಿನ ಜಪಾನಿ ರಾಯಭಾರಿ ಎಚ್. ಹಿರಾಬಯ್‌ಷಿ ಅವರ ಸಮ್ಮುಖದಲ್ಲಿ ಕೆಲವು ಒಪ್ಪಂದಗಳಿಗೆ ನಿಯೋಗ ಸಮ್ಮತಿ ಸೂಚಿಸಿತು.
ಜಪಾನಿನ ಪ್ರಧಾನಿ ಯಾಷಿರೊ ಮೋರಿ ಅವರ ಇತ್ತೀಚಿನ ಭಾರತ ಭೇಟಿಯ ಸಮಯದಲ್ಲಿ , ಕೇಂದ್ರದ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಮೋದ್ ಮಹಾಜನ್ ಅವರು ಬಂಡವಾಳ ಹೂಡಿಕೆಗೆ ಅಡ್ಡಿಯಾಗಿರುವ ಕೆಲವು ಅಂಶಗಳನ್ನು ಸರಿಪಡಿಸುವ ಬಗ್ಗೆ ಆಲೋಚಿಸಲಾಗುತ್ತಿದೆ ಎಂದು ವಾಣಿಜ್ಯ ನಿಯೋಗಕ್ಕೆ ತಿಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
(ಐಎಎನ್‌ಎಸ್)
ವಾರ್ತಾ ಸಂಚಯ
ಮುಖಪುಟ / ಬೆಂಗಳೂರು ಐಟಿ.ಕಾಂ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications