ದಕ್ಷಿಣ ಒಳನಾಡಿನಲ್ಲಿ ಮಳೆ, ಉತ್ತರದಲ್ಲಿ ಒಣಹವೆ
ಬೆಂಗಳೂರು : ದೀಪಾವಳಿಗೆ ಬಿಟ್ಟಿದ್ದ ಮಳೆ ಮತ್ತೆ ಆರಂಭವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ತಮಿಳುನಾಡು ಹಾಗೂ ಕರ್ನಾಟಕದ ದಕ್ಷಿಣ ಭಾಗಕ್ಕೆ ಈಶಾನ್ಯ ಮುಂಗಾರು ಕಾಲಿಟ್ಟಿದೆ. ಪುತ್ತೂರು, ಉಪ್ಪಿನಂಗಡಿಗಳಲ್ಲಿ ತಲಾ 2 ಸೆಂಟಿ ಮೀಟರ್ ಹಾಗೂ ಸುಬ್ರಹ್ಮಣ್ಯ, ಕಾರ್ಕಳ ಮೊದಲಾದ ಕಡೆಗಳಲ್ಲಿ ತಲಾ 1 ಸೆಂಟಿ ಮೀಟರ್ ಮಳೆ ಆಗಿದೆ.
ಮುನ್ಸೂಚನೆಯಂತೆ ಮುಂದಿನ 48 ಗಂಟೆಗಳ ಅವಧಿಯಲ್ಲಿ ಸಹ ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆಗಳಲ್ಲಿ ಗುಡುಗಿನಿಂದ ಕೂಡಿದ ಭಾರಿ ಮಳೆ ಬೀಳುವ ನಿರೀಕ್ಷೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆಗಳೇನೂ ಕಂಡುಬರುವುದಿಲ್ಲ. ಆದರೆ, ಕರ್ನಾಟಕದ ದಕ್ಷಿಣ ಭಾಗಗಳಲ್ಲಿ ದಿನದ ಕನಿಷ್ಠ ಉಷ್ಣಾಂಶ ಕೊಂಚ ಇಳಿಮುಖವಾಗುವ ಸಂಭವ ಇದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಕೂಡ ರಾಜ್ಯದ ಕೆಲವು ಭಾಗಗಳಲ್ಲಿ ಕನಿಷ್ಠ ಉಷ್ಣಾಂಶದಲ್ಲಿ ಸ್ವಲ್ಪ ಬದಲಾವಣೆ ಆಗಿತ್ತು. ಉತ್ತರ ಒಳನಾಡಿನಲ್ಲಿ ತಾಪಮಾನ ಸಾಮಾನ್ಯಕ್ಕಿಂತಲೂ ಅಧಿಕವಾಗಿತ್ತು.
ರಾಜ್ಯದಲ್ಲಿ ಕನಿಷ್ಠ ಉಷ್ಣಾಂಶ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 17.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮೋಡ ಮುಸುಕಿದ ವಾತಾವರಣ ಇದ್ದು, ಕೆಲವು ಬಡಾವಣೆಗಳಲ್ಲಿ ಹಗುರ ಮಳೆ ಆಗುವ ಸಂಭವ ಇದೆ. ಕನಿಷ್ಠ ಉಷ್ಣಾಂಶ 10ಡಿಗ್ರಿ ಸೆಲ್ಸಿಯಸ್ ಇರುತ್ತದೆ ಎನ್ನುತ್ತದೆ ಹವಾಮಾನ ಇಲಾಖೆ.
ರಾಜ್ಯದ ಉತ್ತರ ಒಳನಾಡಿನಲ್ಲಿ ಸಂಡಿಗೆ ಒಣಗಿಸುವಷ್ಟು ಬಿಸಿಲಿಲ್ಲದಿದ್ದರೂ, ಬಿಸಿಲು ಹಿತವಾಗಿದೆ. ಇತ್ತ ದಕ್ಷಿಣ ಒಳನಾಡಿನಲ್ಲಿ ತಂಪೆರೆಯುವಂತಾ ಮಳೆಯಾಗುತ್ತಿದೆ. ಮಲೆನಾಡಿನಲ್ಲಿ ಶೀತ ಮಾರುತಗಳು ನವ ಚೈತನ್ಯ ನೀಡುತ್ತಿವೆ. ಒಟ್ಟಿನಲ್ಲಿ ಇತ್ತೀಚೆಗೆ ಮಳೆರಾಯ ಉಂಟುಮಾಡಿದ ಉಪಟಳದಿಂದ ರಾಜ್ಯ ಸಹಜಸ್ಥಿತಿಗೆ ಮರಳುತ್ತಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications