ಮಂಗಳೂರಿನಲ್ಲಿ ನಕಲಿ ಪಾಸ್ಪೋರ್ಟ್ ಜಾಲ, ಇಬ್ಬರ ಬಂಧನ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೋಲೀಸ್ ಠಾಣೆಗಳ ನಕಲಿ ಸೀಲುಗಳನ್ನು ಸೃಷ್ಟಿಸಿ, ಪಾಸ್ಪೋರ್ಟ್ ಕಚೇರಿಗೆ ನಕಲಿ ಮಾಹಿತಿ ಸಂಗ್ರಹಣಾ ಅರ್ಜಿಗಳನ್ನು ನೀಡಿ ವಂಚಿಸುತ್ತಿದ್ದ ಆರೋಪದ ಮೇರೆಗೆ ಜಿಲ್ಲಾ ಅಪರಾಧ ಪತ್ತೆದಳದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ನಕಲಿ ಸೀಲುಗಳು ಹಾಗೂ ಪಾಸ್ಪೋರ್ಟ್ ಸಂಗ್ರಹಣಾ ಅರ್ಜಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರನ್ನು ಉಪ್ಪಿನಂಗಡಿ ಕಾಡಮನೆಯ ಯು.ಎಂ. ಹೈದರ್ ಹಾಗೂ ಮಂಗಳೂರಿನ ಪಾಯಿಸ್ ಕಾಂಪೌಂಡಿನ ಅಬ್ದುಲ್ ಸಮದ್ ಎಂದು ಪೊಲೀಸರು ತಿಳಿಸಿದ್ದಾರೆ. ಅಬ್ದುಲ್ ಸಮದ್ ನಗರದ ಏರ್ಲಿಂಕ್ಸ್ ಸಂಸ್ಥೆಯನ್ನು ನಡೆಸುತ್ತಿದ್ದಾನೆ ಎನ್ನಲಾಗಿದೆ.
ಆರೋಪಿಗಳು ಸಲ್ಲಿಸಿರುವ ನಕಲಿ ಫಾರ್ಮ್ಗಳು ಬೆಂಗಳೂರು ಪಾಸ್ಪೋರ್ಟ್ ಕಚೇರಿ ತಲುಪುತ್ತಿದ್ದು, ಇದರಿಂದಾಗಿ ಪೊಲೀಸ್ ದಾಖಲೆಗಳಲ್ಲಿ ಇರುವ ವ್ಯಕ್ತಿಗಳು ಪಾಸ್ಪೋರ್ಟ್ ಪಡೆಯುವುದು ಸುಲಭವಾಗುತ್ತಿತ್ತು . ವಂಚನೆಯ ಜಾಲದಲ್ಲಿ ಬೆಂಗಳೂರು ಪಾಸ್ಪೋರ್ಟ್ ಕಚೇರಿಯ ವ್ಯಕ್ತಿಗಳು ಕೂಡ ಪಾಲ್ಗೊಂಡಿರುವ ಶಂಕೆಗಳಿವೆ.
ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಾಖಲಾದ ನಕಲಿ ಪಾಸ್ಪೋರ್ಟ್ ಪ್ರಕರಣವೊಂದರ ತನಿಖೆಯಿಂದಾಗಿ ಈ ಜಾಲ ಹೊರ ಬಿದ್ದಿದೆ. ಅಪರಾಧ ಪತ್ತೆದಳದ ಎಸ್ಪಿ ಎಚ್.ಡಿ. ಮೆಂಡೊನ್ಸಾ ಹಾಗೂ ಸಿಬ್ಬಂದಿಗಳಾದ ವಿಶ್ವನಾಥ, ಸೀತಾರಾಮ, ವಸಂತ, ಅಶೋಕ, ವಿಶ್ವನಾಥ, ಶಶಿಧರ ಶೆಟ್ಟಿ, ದಿನೇಶ, ಪ್ರಭಾಕರ ಅವರು ನಕಲಿ ಪಾಸ್ಪೋರ್ಟ್ ಜಾಲ ಪತ್ತೆಯ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
(ಮಂಗಳೂರು ಪ್ರತಿನಿಧಿಯಿಂದ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications