ಕನಿಷ್ಠ ಉಷ್ಣಾಂಶದಲ್ಲಿ ಕೊಂಚ ಬದಲಾವಣೆ
ಬೆಂಗಳೂರು: ಏನಿತು ವರ್ಣಿಸಲಿ, ನಿವೃತ್ತರ ಸ್ವರ್ಗ ಉದ್ಯಾನ ನಗರಿಯ ಹವಾಮಾನವ. ಶನಿವಾರವಂತೂ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಹನಗಳ ಹೊಗೆಯ ನಡುವೆಯೂ ಹವೆ ಆಹ್ಲಾದಕರವಾಗಿತ್ತು. ಹೆಚ್ಚು ಸುಡದ, ಚಳಿ ಗಾಳಿಯೂ ಇಲ್ಲದ ಹಿತವಾದ ಬಿಸಿಲಿತ್ತು. ಈ ಮಧ್ಯೆ ರಾಜ್ಯದ ಉತ್ತರ ಒಳನಾಡಿನ ಅಲ್ಲಲ್ಲಿ ಮಳೆಯೂ ಆಗಿತ್ತು.
ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಮೂಡಿತ್ತು. ಒಳನಾಡಿನ ಕೆಲವೆಡೆ ಕನಿಷ್ಠ ಉಷ್ಣಾಂಶದಲ್ಲಿ ಏರಿಕೆ ಕಂಡು ಬಂತು. ಉಳಿದೆಡೆ ಸಾಧಾರಣವಾಗಿತ್ತು. ಶಿವಮೊಗ್ಗದಲ್ಲಿ ಕನಿಷ್ಠ ತಾಪಮಾನ 18.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಮುನ್ಸೂಚನೆಯಂತೆ ರಾಜ್ಯದ ಕೆಲವು ಕಡೆ ಮುಂದಿನ 48 ಗಂಟೆಗಳ ಅವಧಿಯಲ್ಲಿ ಮಳೆ ಅಥವಾ ಗುಡುಗಿನಿಂದ ಕೂಡಿದ ಸುರಿಮಳೆ ಬೀಳುವ ನಿರೀಕ್ಷೆ ಇದೆ. ಉಳಿದಂತೆ ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆಗಳೇನೂ ಇರುವುದಿಲ್ಲ ಎಂಬುದು ರಾಜ್ಯ ಹವಾಮಾನ ಇಲಾಖೆಯ ಲೆಕ್ಕಾಚಾರ.
ಸ್ಥಳೀಯ ಹವಾಮಾನ ಮುನ್ಸೂಚನೆಯ ರೀತ್ಯ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮುಖ್ಯವಾಗಿ ಶುಭ್ರ ಆಕಾಶ ಇರುತ್ತದಾದರೂ, ಸಂಜೆ ಅಥವಾ ರಾತ್ರಿ ಹಗುರದಿಂದ ಮಳೆ ಬೀಳುವ ಸಂಭವ ಇದೆ. ಬೆಂಗಳೂರಿನಲ್ಲಿ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ತಲುಪುವ ಸೂಚನೆ ಇದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications