1 ತಿಂಗಳಲ್ಲಿ ಸರ್ಕಾರಿ ಹೈಸ್ಕೂಲುಗಳಲ್ಲಿ ಐಟಿ ಶಿಕ್ಷಣ ಜಾರಿ
ಬೆಂಗಳೂರು : ರಾಜ್ಯದ 1 ಸಾವಿರ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಮಾಹಿತಿ ತಂತ್ರಜ್ಞಾನ ಶಿಕ್ಷಣ ನೀಡುವ ಯೋಜನೆ ಇನ್ನೊಂದು ತಿಂಗಳಲ್ಲಿ ಜಾರಿಗೆ ಬರುವ ನಿರೀಕ್ಷೆಯಿದೆ ಎಂದು ಐಟಿ ಇಲಾಖೆ ನಿರ್ದೇಶಕ ಇ.ವಿ.ರಮಣರೆಡ್ಡಿ ಭಾನುವಾರ ತಿಳಿಸಿದ್ದಾರೆ.
ಬೆಂಗಳೂರು ಐಟಿ ಡಾಟ್ ಕಾಂ ಮೇಳದ ಸಂದರ್ಭದಲ್ಲಿ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಸ್ಟೂಡೆಂಟ್ಸ್ ಇಂಟರ್ನೆಟ್ ವರ್ಲ್ಡ್ ಕಾರ್ಯಕ್ರಮದ ಕೊನೆ ದಿನ ಐಟಿ ನಿರ್ದೇಶಕರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಆ್ಯಪ್ಟೆಕ್, ಎಜುಕಾಮ್ ಮತ್ತು ಎನ್ಐಐಟಿ ಸಂಸ್ಥೆಗಳಿಗೆ ಐಟಿ ಶಿಕ್ಷಣದ ಉಸ್ತುವಾರಿ ವಹಿಸಲಾಗಿದ್ದು, ಎಲ್ಲಾ 745 ಹೋಬಳಿಗಳ 1 ಸಾವಿರ ಪ್ರೌಢಶಾಲೆಗಳ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿವೆ.
ಮೂವತ್ತು ಕೋಟಿ ರುಪಾಯಿಯ ಈ ಯೋಜನೆಯಲ್ಲಿ ಶಾಲೆಗಳಲ್ಲಿ ಕಂಪ್ಯೂಟರ್ ಕೊಠಡಿ ನಿರ್ಮಾಣಕ್ಕೆ 40- 50 ಸಾವಿರ ರುಪಾಯಿ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಇನ್ನು 5 ವರ್ಷಗಳ ಕಾಲ ಮೂರೂ ಸಂಸ್ಥೆಗಳು ತರಬೇತಿ ಉಸ್ತುವಾರಿ ನೋಡಿಕೊಳ್ಳಲಿದ್ದು, ಪ್ರತಿ ಮೂರು ತಿಂಗಳಿಗೆ 10 ಸಾವಿರ ರುಪಾಯಿ ತರಬೇತಿ ವೆಚ್ಚವನ್ನು ಸರ್ಕಾರ ನೀಡಲಿದೆ.
ನೂರ ಐವತ್ತು ವಿದ್ಯಾರ್ಥಿಗಳಿರುವ ಶಾಲೆಗೆ 5 ಕಂಪ್ಯೂಟರ್ ಹಾಗೂ ಒಂದು ಸರ್ವರ್, 250 ವಿದ್ಯಾರ್ಥಿಗಳಿರುವ ಶಾಲೆಗೆ 9 ಕಂಪ್ಯೂಟರ್ ಮತ್ತು 250ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಗೆ 14 ಕಂಪ್ಯೂಟರ್ ಒದಗಿಸಲಾಗುವುದು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಬೆಂಗಳೂರು ಐಟಿ.ಕಾಂ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications