ಸುರತ್ಕಲ್ನಲ್ಲಿ ವಿಶ್ವ ಬಂಟರ ಸಾಂಸ್ಕೃತಿಕ ಕಲೋತ್ಸವ
ಮಂಗಳೂರು: ಮುಂಬರುವ ಜನವರಿ 20 ಹಾಗೂ 21ರಂದು ಸುರತ್ಕಲ್ನಲ್ಲಿ ವಿಶ್ವ ಬಂಟರ ಸಾಂಸ್ಕೃತಿಕ ಕಲೋತ್ಸವ ನಡೆಯಲಿದೆ. ಮಂಗಳೂರಿನ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಜರುಗುವ ಈ ಕಲೋತ್ಸವವನ್ನು ನಡೆಸಲು ಸುರತ್ಕಲ್ ಬಂಟರ ಸಂಘ ಮುಂದೆ ಬಂದಿದೆ. ಇದಕ್ಕಾಗಿ ಸಕಲ ಸಿದ್ಧತೆಗಳೂ ಆರಂಭವಾಗಿವೆ.
ಸುರತ್ಕಲ್ನ ಸುಭಾಷಿತ ನಗರದಲ್ಲಿ ಈ ಉತ್ಸವ ನಡೆಯಲಿದೆ ಎಂದು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ದೇವಾನಂದ ಶೆಟ್ಟಿ ಪತ್ರಕರ್ತರಿಗೆ ತಿಳಿಸಿದ್ದಾರೆ. ಈ ಕಾರ್ಯಕ್ರಮಕ್ಕೆ 8ರಿಂದ 10 ಲಕ್ಷ ರುಪಾಯಿ ವೆಚ್ಚ ಆಗಲಿದ್ದು, 47 ಬಂಟರ ಸಂಘಗಳ ಸುಮಾರು ನಾಲ್ಕು ಸಾವಿರ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು.
ಬಂಟರ ಕಲೋತ್ಸವ ಸಂದರ್ಭದಲ್ಲಿ ಬಂಟರ ಪರಂಪರೆಯನ್ನು ಪ್ರತಿಬಿಂಬಿಸುವ ಸಲುವಾಗಿ ಕಂಬಳ ಕೋಣ, ಉತ್ತಮ ತಳಿಯ ಹಸು, ಹುಂಜ, ಪ್ರಾಚೀನ ಬೇಸಾಯ ಪದ್ಧತಿಯಲ್ಲಿ ಬಳಸಲಾಗುತ್ತಿದ್ದ ಸಲಕರಣೆಗಳ ವಸ್ತು ಪ್ರದರ್ಶನ ಸಹ ನಡೆಯಲಿದೆ ಎಂದರು. ಉತ್ಸವದ ಅಂಗವಾಗಿ ಭಾಷಣ, ಪ್ರಬಂಧ, ಭಾವಗೀತೆ, ಫ್ಯಾನ್ಸಿ ಡ್ರೆಸ್, ರಂಗೋಲಿ, ಚಿತ್ರರಚನೆ ಮುಂತಾದ ಸ್ಪರ್ಧೆಗಳೂ ಜರುಗಲಿವೆ ಎಂದ ಅವರು ಸುರತ್ಕಲ್ ಬಂಟರ ಸಂಘದಲ್ಲಿ ಸುಮಾರು 1600 ಮಂದಿ ಸದಸ್ಯರಿದ್ದಾರೆ ಎಂದು ತಿಳಿಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications