ಕೃಷಿ- ಕೈಗಾರಿಕಾ ಕ್ರಾಂತಿಯ ರೂವಾರಿ ಸಿ. ಸುಬ್ರಹ್ಮಣ್ಯಂ ಇನ್ನಿಲ್ಲ
ಚೆನ್ನೈ : ಭಾರತ ರತ್ನ ಪ್ರಶಸ್ತಿ ವಿಜೇತ ಹಾಗೂ ಕೇಂದ್ರದ ಮಾಜಿ ಸಚಿವ, ಹಿರಿಯ ಮುತ್ಸದ್ದಿ ಸಿ. ಸುಬ್ರಹ್ಮಣ್ಯಂ ಮಂಗಳವಾರ ಮಧ್ಯಾಹ್ನ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು .
ಅಸ್ತಮಾದಿಂದ ಬಳಲುತ್ತಿದ್ದ ಅವರಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡು, ಆಸ್ಪತ್ರೆಗಾಗಿ ಸಾಗಿಸುವ ಹಾದಿಯಲ್ಲಿ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. 70 ರ ದಶಕದ ಮೊದಲ ಭಾಗದಲ್ಲಿ ದೇಶಾದ್ಯಂತ ಹಸಿರು ಕ್ರಾಂತಿಯನ್ನು ರೂಪಿಸಿದ್ದ ಸುಬ್ರಹ್ಮಣ್ಯಂ ಅವರು, 50 ರ ದಶಕದಲ್ಲಿ ಮದರಾಸು ರಾಜ್ಯಕ್ಕೆ ಕೈಗಾರಿಕೀಕರಣದ ಲೇಪ ನೀಡಿದರು.
ಕೇಂದ್ರ ಸಂಪುಟದಲ್ಲಿ ಹಣಕಾಸು, ಕೃಷಿ ಖಾತೆಗಳನ್ನು ನಿರ್ವಹಿಸಿದ್ದ ಸುಬ್ರಹ್ಮಣ್ಯಂ ಅವರು ತಮಿಳು ನಾಯಕ ಕೆ. ಕಾಮರಾಜ್, ಮಾಜಿ ರಾಷ್ಟ್ರಪತಿ ಆರ್. ವೆಂಕಟರಾಮನ್ ಅವರ ನಿಕಟ ಸಂಪರ್ಕ ಹೊಂದಿದ್ದರು. 1910 ರಲ್ಲಿ ತಮಿಳುನಾಡಿನ ಪೊಲ್ಲಾಚಿ ಎನ್ನುವ ಗ್ರಾಮದಲ್ಲಿ ಜನಿಸಿದ್ದ ಅವರು, ಗಾಂಧಿಯವರ ಕರೆಗೆ ಓಗೊಟ್ಟು ಸ್ವಾತಂತ್ರ್ಯ ಚಳವಳಿಗೆ ಧುಮುಕಿದ್ದರು. ಸುಬ್ರಹ್ಮಣ್ಯಂ ಅವರ ಸೇವೆಯನ್ನು ಗೌರವಿಸಿ 1998 ರಲ್ಲಿ ಭಾರತ ಸರ್ಕಾರ, ದೇಶದ ಪರಮೋಚ್ಛ ಗೌರವ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿತ್ತು .
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications