ರಸ್ತೆ ದುರಸ್ತಿ : ಕಳಪೆ ಕಾಮಗಾರಿ ವಿರುದ್ಧ ತನಿಖೆ ಭರವಸೆ
ಬೆಂಗಳೂರು : ಬೆಂಗಳೂರು ನಗರದ ರಸ್ತೆಗಳ ದುರಸ್ತಿಯಲ್ಲಿ ಅವ್ಯವಹಾರ ನಡೆದಿದ್ದು, ಕಳಪೆ ಗುಣಮಟ್ಟದ ಕಾಮಗಾರಿ ನಡೆದಿದ್ದರೆ ಆ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವಿಧಾನಸಭೆಯಲ್ಲಿ ಮಂಗಳವಾರ ಆಶ್ವಾಸನೆ ನೀಡಿದರು.
ಬಿ.ಜೆ.ಪಿ.ಯ ಆರ್. ಅಶೋಕ್ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಮುಖ್ಯಮಂತ್ರಿಗಳು, ಈಗಾಗಲೇ ನಗರದ 70 ರಸ್ತೆಗಳ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಉಳಿದ ರಸ್ತೆಗಳ ರಿಪೇರಿ ಕಾಮಗಾರಿ ಫೆಬ್ರವರಿ ಅಂತ್ಯದೊಳಗೆ ಸಮರೋಪಾದಿಯಲ್ಲಿ ನಡೆಯಲಿದೆ ಎಂದು ತಿಳಿಸಿದರು. ಆದರೆ ಈ ಕಾಮಗಾರಿಯಲ್ಲಿ 42 ಕೋಟಿ ರುಪಾಯಿಗಳ ದುರುಪಯೋಗ ಆಗಿದೆ ಎಂಬ ಆರೋಪವನ್ನು ಅವರು ತಳ್ಳಿಹಾಕಿದರು.
ಈ ಯೋಜನೆಗೆ ಹಿಂದಿನ ಸರಕಾರ 104 ಕೋಟಿ ರುಪಾಯಿ ನಿಗದಿ ಪಡಿಸಿತ್ತು. ಇದರ ಪರಿಷ್ಕೃತ ಅಂದಾಜು ಈಗ 205 ಕೋಟಿ ರುಪಾಯಿಗಳಾಗಿವೆ ಎಂದು ಹೇಳಿದರು. ನಿರ್ದಿಷ್ಟ ಲೋಪಗಳ ಬಗ್ಗೆ ಸರಕಾರದ ಗಮನ ಸೆಳೆದರೆ, ಕ್ರಮ ಕೈಗೊಳ್ಳಲು ಹಾಗೂ ತಿದ್ದಿಕೊಳ್ಳಲು ಅವಕಾಶ ಆಗುತ್ತದೆ ಎಂದೂ ಸದಸ್ಯರಿಗೆ ತಿಳಿಸಿದರು.
ಇಡೀ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿದ ಶಾಸಕ ಅಶೋಕ್ ಅವರು ಕಳಪೆ ಕಾಮಗಾರಿಯನ್ನು ಪ್ರತಿಭಟಿಸಿ ಮತ್ತೊಬ್ಬ ಶಾಸಕರಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ಜತೆಯಲ್ಲಿ ಕೆಲಕಾಲ ಧರಣಿ ನಡೆಸಿದರು. (ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications