ತರಳಬಾಳು ವಿದ್ಯಾಸಂಸ್ಥೆಗೆ ಕೆನಡಾ ಪ್ರತಿನಿಧಿಗಳ ಭೇಟಿ
ದಾವಣಗೆರೆ : ಭಾರತದಲ್ಲಿನ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಹಾಗೂ ಸಿಖ್ ಸಮುದಾಯದ ಜನಜೀವನ ಹಾಗೂ ಧಾರ್ಮಿಕ ವಿಧಿ ವಿಧಾನಗಳ ಬಗ್ಗೆ ಅಧ್ಯಯನ ನಡೆಸಲು ಕಳೆದ ಎರಡು ತಿಂಗಳಿನಿಂದ ಪ್ರವಾಸದಲ್ಲಿರುವ ಕೆನಡಾ ವಿಶ್ವವಿದ್ಯಾಲಯದ 18 ಜನರ ತಜ್ಞರ ತಂಡ ಇಲ್ಲಿನ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಅನುಭವ ಮಂಟಪಕ್ಕೆ ಭೇಟಿ ನೀಡಿತ್ತು.
ಪ್ರೊ. ಬ್ರಾಯಂಟ್ ಅವರ ನೇತೃತ್ವದ ಈ ತಂಡ ಈಗಾಗಲೇ ಹರಿದ್ವಾರ, ಋಷಿಕೇಶ್, ಪಾಟಿಯಾಲಾ, ದೇಶದ ಹಲವು ಗುರುದ್ವಾರಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿದೆ. ಅನುಭವ ಮಂಟಪಕ್ಕೆ ಭೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಬ್ರಾಯೆಂಟ್ ಕೆನಡಾದಲ್ಲಿ ಕೂಡ ಹಿಂದೂ, ಮುಸ್ಲಿಂ, ಸಿಖ್ ಹಾಗೂ ಬುದ್ಧ ಧರ್ಮೀಯರಿದ್ದು, ಅವರ ಧರ್ಮ ಪಾಲನೆಗೆ ಹಾಗೂ ಮತಾಚರಣೆಗೆ ತಮ್ಮ ದೇಶ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ ಎಂದರು.
ಬ್ರಾಯೆಂಟ್ ನೇತೃತ್ವದ ತಂಡದಲ್ಲಿದ್ದ ಅಧ್ಯಯನಿಗಳು ಭಾರತೀಯ ಸಂಸ್ಕೃತಿಯ ರೀತ್ಯ ಸೀರೆ, ಕುಪ್ಪುಸ ತೊಟ್ಟು, ಹಣೆಗೆ ಸಿಂಧೂರವಿಟ್ಟು, ಜಡೆಗೆ ಹೂ ಮುಡಿದು ಬಂದಿದ್ದು ಅವರಿಗೆ ಭಾರತೀಯ ಸಂಸ್ಕೃತಿಯ ಬಗ್ಗೆ ಇರುವ ಗೌರವವನ್ನು ಸೂಚಿಸುತ್ತಿತ್ತು. (ದಾವಣಗೆರೆ ಪ್ರತಿನಿಧಿಯಿಂದ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications