ದಾನಿಗಳಿಗೆ ತಿರುಪತಿ ವೆಂಕಟೇಶನ ದರ್ಶನಕ್ಕೆ ವಿಶೇಷ ಪಾಸ್
ತಿರುಪತಿ : ತಿರುಮಲ ತಿರುಪತಿ ದೇವಸ್ಥಾನದ ದತ್ತಿಗೆ ದಾನ ನೀಡಿರುವವರು ಇನ್ನು ಮುಂದೆ ಪ್ರತಿ ಭೇಟಿಯಲ್ಲೂ ಅಧಿಕಾರಿಗಳನ್ನು ಕಂಡು ದರ್ಶನದ ಅನುಮತಿ ಪತ್ರ ಪಡೆಯುವ ಅಗತ್ಯವಿಲ್ಲ. ಸದ್ಯದಲ್ಲೇ ಪಾಸೊಂದನ್ನು ದೇವಸ್ಥಾನದ ಆಡಳಿತ ಮಂಡಳಿ ವಿತರಿಸಲಿದ್ದು, ಅದನ್ನು ಉಪಯೋಗಿಸಿಕೊಂಡು ಯಾವಾಗ ಬೇಕಾದರೂ ದರ್ಶನ ಪಡೆಯಬಹುದಾಗಿದೆ.
ಮಂಗಳವಾರ ನಡೆದ ವಾರದ ಸಹಕಾರ ಸಭೆಯ ಅಧ್ಯಕ್ಷತೆ ವಹಿಸಿದ್ದ ದತ್ತಿಯ ಕಾರ್ಯ ನಿರ್ವಾಹಕ ಅಧಿಕಾರಿ ಪಿ.ಕೃಷ್ಣಯ್ಯ ಬುಧವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಾರೆ. ದೂರದೂರುಗಳಿಂದ ಬರುವ ಭಕ್ತರಿಗೆ ದೇವರ ದರ್ಶನಕ್ಕೆ ಅಡಚಣೆ ಆಗದಂತೆ ದರ್ಶನ ವ್ಯವಸ್ಥೆಯಲ್ಲಿ ಇನ್ನಷ್ಟು ಸುಧಾರಣೆ ತರಲಾಗುವುದು. ವಾಹನ ಸಂಚಾರ ದಟ್ಟಣೆ ತಪ್ಪಿಸಲು ಸೂಕ್ತ ಶಿಸ್ತಿನ ಕ್ರಮ ಕೈಗೊಂಡು ತಪ್ಪಿತಸ್ಥರಿಗೆ ಹಾಗೂ ವಾಹನಗಳನ್ನು ಮಿತಿ ಮೀರಿದ ವೇಗದಲ್ಲಿ ಓಡಿಸುವವರನ್ನು ಶಿಕ್ಷೆಗೆ ಗುರಿ ಪಡಿಸಲಾಗುವುದು ಎಂದರು.
ಲಾಡು ಪ್ರಸಾದ ವಿತರಿಸಲು ಇನ್ನಷ್ಟು ಸಿಬ್ಬಂದಿಯನ್ನು ನೇಮಿಸಿಕೊಂಡು, ಉದ್ದನೆಯ ಕ್ಯೂಗಳನ್ನು ತಪ್ಪಿಸಲು ಮತ್ತಷ್ಟು ಪ್ರಸಾದ ವಿತರಣೆಯ ಕೌಂಟರ್ಗಳನ್ನು ತೆರೆಯಲಾಗುವುದು ಎಂದು ಪಿ.ಕೃಷ್ಣಯ್ಯ ತಿಳಿಸಿದ್ದಾರೆ.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications