Get Updates
Get notified of breaking news, exclusive insights, and must-see stories!

ರಾಜ್ಯದಲ್ಲಿ ಒಣಹವೆಯ ಪಾರುಪತ್ಯ

ಬೆಂಗಳೂರು : ಕರಾವಳಿ ಕರ್ನಾಟಕ ಹಾಗೂ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ ಎಂದು ಹವಾಮಾನ ವೀಕ್ಷಣಾಲಯದ ವರದಿ ತಿಳಿಸಿದೆ. ರಾಜ್ಯದಲ್ಲಿ ಕನಿಷ್ಠ ತಾಪಮಾನ ಕೆಲವೆಡೆ ಕುಸಿದಿದೆ. ಉಳಿದಂತೆ ಮಾಮೂಲಿನಂತಿತ್ತು.

ಗುಲ್ಬರ್ಗಾದಲ್ಲಿ ಕನಿಷ್ಠ ಉಷ್ಣಾಂಶ 15.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. ಶುಕ್ರವಾರ ಬೆಳಗ್ಗೆ ವರೆಗಿನ ಮುನ್ಸೂಚನೆಯಂತೆ ಮಳೆ ಅಥವಾ ಗುಡುಗು ಸಹಿತ ಸುರಿಮಳೆ ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಚದುರಿದಂತೆ ಬೀಳುವ ಸಾಧ್ಯತೆ ಇದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಎಂದಿನಂತೆ ಒಣಹವೆ ಮುಂದುವರಿಯಲಿದೆ.

ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಮುಸುಕಿದ ವಾತಾವರಣ ಇದ್ದು, ಬೆಂಗಳೂರಿನ ಕೆಲವು ಬಡಾವಣೆಗಳಲ್ಲಿ ಹಗುರವಾಗಿ ಮಳೆ ಸುರಿಯುವ ಸಂಭವ ಇದೆ. ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌ ತಲುಪುವ ಸೂಚನೆ ಇದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+