ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಮಳೆಯ ಸುಳಿವಿಲ್ಲ

By Staff
|
Google Oneindia Kannada News

ಬೆಂಗಳೂರು : ಮತ್ತೆ ಕಳೆದೆರಡು ದಿನದಿಂದ ರಾಜ್ಯದಲ್ಲಿ ಮಳೆಯ ಸುಳಿವಿಲ್ಲ. ಒಣಹವೆಯ ಪಾರುಪತ್ಯವೇ ಹೆಚ್ಚಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ರಾತ್ರಿಯ ತಾಪಮಾನ ಕಡಿಮೆಯಾಗಿತ್ತು. ರಾತ್ರಿಯ ಅತಿ ಕಡಿಮೆ ಉಷ್ಣಾಂಶ 14.8ಡಿಗ್ರಿ ಸೆಲ್ಸಿಯಸ್‌ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿದೆ.

ಬೆಂಗಳೂರಿನಲ್ಲಿರುವ ಹವಾಮಾನ ವೀಕ್ಷಣಾಲಯದ ಮುನ್ಸೂಚನೆಯಂತೆ ದಕ್ಷಿಣ ಒಳನಾಡಿನ ಕೆಲವು ಕಡೆ ಚದುರಿದಂತೆ ಮಳೆ ಅಥವಾ ಗುಡುಗಿನಿಂದ ಕೂಡಿದ ತುಂತುರು ಮಳೆ ಬೀಳುವ ಸಂಭವ ಇದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ.

ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ಹಗುರದಿಂದ ಮಳೆ ಆಗುವ ನಿರೀಕ್ಷೆ ಇದೆ. ರಾತ್ರಿಯ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್‌ ತಲುಪುವ ಸಾಧ್ಯತೆ ಇದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X