ಹುಬ್ಬಳ್ಳಿಯ ತಾರಿಹಾಳ ಇಂಜಿನಿಯರಿಂಗ್ ಕಾಲೇಜು ಇನ್ನಿಲ್ಲ
ಬೆಳಗಾವಿ : ಹುಬ್ಬಳ್ಳಿಯ ತಾರಿಹಾಳ ಎಸ್ಜಿಇಸಿಎಎಸ್ ರೂರಲ್ ಇಂಜಿನಿಯರಿಂಗ್ ಕಾಲೇಜಿನ ಮಾನ್ಯತೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ. ಎಸ್. ರಾಜಶೇಖರಯ್ಯ ಹೇಳಿದ್ದಾರೆ .
ಬೆಳಗಾವಿಯಲ್ಲಿ ಪತ್ರಕರ್ತರೊಡನೆ ಮಾಡತನಾಡುತ್ತಾ ಅವರು ಅಖಿಲ ಭಾರತ ತಾಂತ್ರಿಕ ಮಂಡಳಿ ಮತ್ತು ಕರ್ನಾಟಕ ವಿವಿಯ ಅನುಮೋದನೆಯಾಂದಿಗೆ ಈ ಕಾಲೇಜಿಗೆ 98-99 ರಲ್ಲಿ ನೀಡಿದ ಮಾನ್ಯತೆಯನ್ನು ರದ್ದು ಪಡಿಸಲಾಗಿದೆ ಎಂದರು. ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳನ್ನು ಅವರ ಮೆರಿಟ್ ಆಧಾರದ ಮೇಲೆ ಇತರ ಕಾಲೇಜುಗಳಿಗೆ ವರ್ಗಾಯಿಸಲಾಗುವುದು ಎಂದು ರಾಜಶೇಖರಯ್ಯ ತಿಳಿಸಿದರು.
ಕಳೆದ ಆಗಸ್ಟ್ನಲ್ಲಿ ಕಾಲೇಜಿಗೆ ಭೇಟಿ ನೀಡಿದ ಸ್ಥಳೀಯ ತನಿಖಾ ಸಮಿತಿ ಕಾಲೇಜಿನಲ್ಲಿರುವ ನ್ಯೂನತೆಗಳನ್ನು ಸರಿಪಡಿಸಲು ಹೇಳಿತ್ತು. ಆದರೆ ಆ ಬಗ್ಗೆ ಕಾಲೇಜಿನ ಪ್ರಾಚಾರ್ಯರು ಕಳಿಸಿರುವ ವರದಿ ತೃಪ್ತಿಕರವಾಗಿಲ್ಲ. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಕೇಳಿದ್ದರೂ ಕಾಲೇಜು ಅದನ್ನು ಈವರೆಗೆ ಒದಗಿಸಿಲ್ಲ . ವಿಶ್ವ ವಿದ್ಯಾಲಯದ ಕಾರ್ಯಕಾರಿ ಪರಿಷತ್ ನೇಮಿಸಿದ್ದ ವಿಶೇಷ ಸಮಿತಿ ಕೂಡ ಕಾಲೇಜಿಗೆ ಭೇಟಿ ನೀಡಿದ್ದು, ಮಾನ್ಯತೆ ರದ್ದುಗೊಳಿಸಲು ಶಿಫಾರಸು ಮಾಡಿದೆ ಎಂದು ಕಾಲೇಜಿನ ಮಾನ್ಯತೆ ರದ್ದಾಗಿರುವ ಹಿನ್ನೆಲೆಯನ್ನು ರಾಜಶೇಖರಯ್ಯ ವಿವರಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications