ಉಡುಪಿಯ ಪ್ರಥಮ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಬನ್ನಂಜೆ ಗೋವಿಂದಾಚಾರ್ಯ
ಉಡುಪಿ : ಉಡುಪಿ ಜಿಲ್ಲೆಯ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 16 ಹಾಗೂ 17ರಂದು ನಡೆಯಲಿದ್ದು, ಸಮ್ಮೇಳನಾಧ್ಯಕ್ಷರಾಗಿ ವಿದ್ಯಾ ವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಪ್ರಕಟಣೆ ತಿಳಿಸಿದೆ.
ಕನ್ನಡ - ಸಂಸ್ಕೃತ ವಿದ್ವಾಂಸರಾಗಿರುವ ಗೋವಿಂದಾಚಾರ್ಯರು ಉತ್ತಮ ವಾಗ್ಮಿಗಳು, ಭಾಷಾಂತರಕಾರ, ಕವಿ ಮತ್ತು ಗದ್ಯ ಲೇಖಕರಾಗಿ ಪ್ರಸಿದ್ಧರು. ಮಹಾಭಾರತ ರಾಮಾಯಣ, ವೇದ ಉಪನಿಷತ್, ಭಾಗವತ ಮತ್ತಿತರ ಸಂಸ್ಕೃತ ಕೃತಿಗಳ ಕುರತು ಉಪನ್ಯಾಸಗಳನ್ನು ನೀಡುತ್ತಾರೆ. ಉತ್ತಮ ಪ್ರವಚನಕಾರರಾಗಿರುವ ಗೋವಿಂದಾಚಾರ್ಯರು ಉದಯವಾಣಿಯ ಮ್ಯಾಗಸೀನ್ ವಿಭಾಗದ ನಿವೃತ್ತ ಸಂಪಾದಕರು.
ಐವತ್ತಕ್ಕೂ ಹೆಚ್ಚು ಸ್ವರಚಿತ, ಅನುವಾದಿತ ಮತ್ತು ಸಂಪಾದಿತ ಕೃತಿಗಳನ್ನು ಬರೆದಿದ್ದಾರೆ. ಅವರು ಭಾಷಾಂತರಿಸಿದ ಕೃತಿಗಳಲ್ಲಿ ಬಾಣಭಟ್ಟನ ಕಾದಂಬರಿ, ಶೂದ್ರಕನ ಆವೆ ಮಣ್ಣಿನ ಆಟದ ಬಂಡಿ, ಭವಭೂತಿಯ ಮತ್ತೆ ರಾಮನ ಕತೆ ಪ್ರಸಿದ್ಧವಾದವು. ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಧರ್ಮಸ್ಥಳ ವಿರೇಂದ್ರ ಹೆಗ್ಗಡೆ ಉದ್ಘಾಟಿಸಲಿದ್ದಾರೆ.
(ಇನ್ಫೋ ವಾರ್ತೆ)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications