ನಿರ್ಲಕ್ಷ್ಯಕ್ಕೊಳಗಾಗಿರುವ ಸರ್.ಎಂ.ವಿಶ್ವೇಶ್ವರಯ್ಯನವರ ಸಮಾಧಿ
ಬೆಂಗಳೂರು : ಕೋಲಾರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿರುವ ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯನವರ ಸಮಾಧಿ ಸ್ಥಳ ಸರ್ಕಾರ ಹಾಗೂ ಸಾರ್ವಜನಿಕರಿಂದ ತೀವ್ರ ನಿರ್ಲಕ್ಷ್ಯಕ್ಕೊಳಗಾಗಿರುವ ವಿಷಯ ಶುಕ್ರವಾರ ವಿಧಾನ ಪರಿಷತ್ತಿನಲ್ಲಿ ಮಾರ್ಧನಿಸಿತು.
ಪ್ರಶ್ನೋತ್ತರ ಅವಧಿಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಬಿ.ಜೆ.ಪಿ.ಯ ಡಾ. ಎಂ.ಆರ್. ತಂಗಾ ಅವರು, ಕರ್ನಾಟಕದ ಹೆಮ್ಮೆಯ ಪುತ್ರ, ವಿಶ್ವವಿಖ್ಯಾತ ಎಂಜಿನಿಯರ್ ಸರ್.ಎಂ.ವಿ. ಅವರ ಸಮಾಧಿ ಸ್ಥಳದ ಬಗ್ಗೆ ಸರಕಾರ ತಳೆದಿರುವ ನಿರ್ಲಕ್ಷ್ಯದ ಬಗ್ಗೆ ವಿವರಿಸಿದಾಗ ಸಭೆಯಲ್ಲಿ ಗಂಭೀರ ಮೌನ.
ವಿಶ್ವೇಶ್ವರಯ್ಯನವರ ಸಮಾಧಿ ಸ್ಥಳ ಗಲೀಜಿನ ಆಗರವಾಗಿದೆ. ಆವರಣವೆಲ್ಲಾ ಕಸದ ರಾಶಿಯಿಂದ ಕೂಡಿದೆ. ಅಲ್ಲಿ ಪಶು ಸಂಗೋಪನಾ ಇಲಾಖೆಯ ಉಪಕರಣಗಳನ್ನು ರಾಶಿ ಹಾಕಲಾಗಿದೆ. ಹಸುಗಳಿಗೆ ಕೃತಕ ಗರ್ಭಧಾರಣೆಯ ಕೆಲಸವೂ ಈ ಸಮಾಧಿ ಸ್ಥಳದಲ್ಲಿಯೇ ನಡೆಯುತ್ತಿದೆ, ಇದು ಭಾರತ ರತ್ನ ಗೌರವಕ್ಕೆ ಪಾತ್ರರಾದ ಮಹಾನ್ ವ್ಯಕ್ತಿಗೆ ಮಾಡುತ್ತಿರುವ ಅವಮಾನ ಎಂದು ವಿವರಿಸಿದರು.
ವಿಶ್ವೇಶ್ವರಯ್ಯನವರು ಭಾರತದ ಹೆಮ್ಮೆಯ ಪುತ್ರ. ಅವರು ಬಳಸುತ್ತಿದ್ದ ವಸ್ತುಗಳನ್ನು ಕಣ್ಣಾರೆ ಕಾಣುವುದೇ ಸೌಭಾಗ್ಯ ಎಂದು ತಿಳಿದವರಿದ್ದಾರೆ. ಆದರೆ, ಸಮಾಧಿಯ ಬಳಿಯೇ ಇರುವ ವಿಶ್ವೇಶ್ವರಯ್ಯನವರ ವಸ್ತು ಸಂಗ್ರಹಾಲಯ ಅವರ ಕುಟುಂಬದವರ ವಶದಲ್ಲಿದೆ. ಈ ವಸ್ತು ಸಂಗ್ರಹಾಲಯಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ. ಕೇವಲ ವಿವಿಐಪಿಗಳಿಗೆ ಮಾತ್ರ ಅವಕಾಶ ಎಂದು ಈ ಸಂದರ್ಭದಲ್ಲಿ ಬಿಜೆಪಿಯ ಡಾ. ಶಿವಯೋಗಿ ಸ್ವಾಮಿ ಆರೋಪಿಸಿದರು.
ವಿಶ್ವೇಶ್ವರಯ್ಯನವರ ಸಮಾಧಿ ಸ್ಥಳದ ಶೋಚನೀಯ ಸ್ಥಿತಿಗೆ ಇಡೀ ಸದನವೇ ವಿಷಾದ ವ್ಯಕ್ತಪಡಿಸಿದಾಗ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್ ಅವರು ವಿವರ ನೀಡಿ. ಸಮಾಧಿ ಇರುವ ನಾಲ್ಕೂವರೆ ಎಕರೆ ಪ್ರದೇಶ ತೋಟಗಾರಿಕೆ ಇಲಾಖೆಯ ವಶದಲ್ಲಿದೆ. ಇದು ಪ್ರಾಚ್ಯವಸ್ತು ಇಲಾಖೆಯ ವ್ಯಾಪ್ತಿಗೆ ಬರುವುದಿಲ್ಲ. ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಿ ವಿಶ್ವೇಶ್ವರಯ್ಯನವರ ಸಮಾಧಿ ಸ್ಥಳವನ್ನು ಶುಚಿಯಾಗಿಡುವಂತೆ ಕೋರಲಾಗುವುದು ಎಂದು ಭರವಸೆ ನೀಡಿದರು.
ವಾರ್ತಾ ಸಂಚಯ
ಮುಖಪುಟ / ವಿಧಾನ ಮಂಡಲ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications