ಕಚ್ಚಾ ರೇಷ್ಮೆ ಉತ್ಪಾದನೆ ಗುಣಮಟ್ಟ ಹೆಚ್ಚಿಸಲು ಕ್ರಮ
ಮೈಸೂರು : ಹೆಚ್ಚುತ್ತಿರುವ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಬೇಡಿಕೆಗನುಗುಣವಾಗಿ ಕಚ್ಚಾ ರೇಷ್ಮೇ ಉತ್ಪಾದನೆಯನ್ನು ಇನ್ನಷ್ಟು ಸದೃಢಗೊಳಿಸಲಾಗುವುದೆಂದು ರಾಜ್ಯದ ರೇಷ್ಮೆ ಅಭಿವೃದ್ಧಿ ಆಯುಕ್ತ ಮತ್ತು ನಿರ್ದೇಶಕ ನಡಾದರ್ ಶನಿವಾರ ಹೇಳಿದ್ದಾರೆ.
ಇಲ್ಲಿ ನಡೆಯುತ್ತಿರುವ ರೇಷ್ಮೇ ಕೃಷಿ ಕುರಿತ ವಿಚಾರಸಂಕಿರಣದಲ್ಲಿ ಮಾತನಾಡುತ್ತಿದ್ದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಂದು ಲಕ್ಷ ಟನ್ ಮತ್ತು ಸ್ಥಳೀಯವಾಗಿ 25 ಸಾವಿರ ಟನ್ ರೇಷ್ಮೆಗೆ ಬೇಡಿಕೆ ಇದೆ. ಆದರೆ ಭಾರತದಲ್ಲಿ ವಾರ್ಷಿಕ ಕೇವಲ 16 ಸಾವಿರ ಟನ್ ರೇಷ್ಮೆ ಉತ್ಪಾದನೆ ಇದೆ. ಹಾಗಾಗಿ ಭಾರತ, ಚೀನಾದಿಂದ ಈ ವರ್ಷ 7 ಸಾವಿರ ಟನ್ ರೇಷ್ಮೆಯನ್ನು ಆಮದು ಮಾಡಿಕೊಂಡಿದೆ ಇದನ್ನು ಸರಿಗಟ್ಟಬೇಕಾಗಿದೆ ಎಂದು ಅವರು ಹೇಳಿದ್ದಾರೆ.
ವಾರ್ಷಿಕ 8 ಸಾವಿರ ಟನ್ ರೇಷ್ಮೆ ಉತ್ಪಾಧಿಸುವ ಮೂಲಕ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ರೇಷ್ಮೆ ಆಮದು ಕಡಿಮೆ ಮಾಡಲು ರೇಷ್ಮೆ ಗುಣಮಟ್ಟ ಹೆಚ್ಚಿಸಬೇಕಾದ ಅಗತ್ಯವಿದೆ. ಈಗ ಬೈವೋಲ್ಟನ್ ಹೈಬ್ರಿಡ್ ರೇಷ್ಮೆ ಉತ್ಪಾದನೆ ವಾರ್ಷಿಕ 2 ಸಾವಿರ ಟನ್ ಇದ್ದು, ಅದನ್ನು 2010ನೇ ಇಸವಿ ಹೊತ್ತಿಗೆ 60 ಸಾವಿರ ಟನ್ಗೇರಿಸುವ ಉದ್ದೇಶ ಹೊಂದಲಾಗಿದೆ ಎಂದು ಅವರು ತಿಳಿಸಿದ್ದಾರೆ.
ರೇಷ್ಮೆ ಗುಣಮಟ್ಟವನ್ನು 2ಎ ಮತ್ತು 3ಎ ದರ್ಜೆಗೇರಿಸಲು ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ವಿವಿಧ ರೀತಿಯ ತಳಿಗಳನ್ನು ಪರಿಚಯಿಸಿದೆ ಎಂದು ಸಂಸ್ಥೆಯ ನಿರ್ದೇಶಕ ಆರ್. ಕೆ. ದತ್ತಾ ತಿಳಿಸಿದ್ದಾರೆ.
(ಯುಎ-ನ್-ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications