ಹಸಿದ ಮಕ್ಕಳಿಗೆ ತುತ್ತು ಕೊಡಿ : ಸಂಘ ಸಂಸ್ಥೆಗಳಿಗೆ ಪ್ರಧಾನಿ ಮನವಿ
ಬೆಂಗಳೂರು : ಎಲ್ಲರಿಗೂ ಆಹಾರ ಅನ್ನುವ ಸರ್ಕಾರದ ಗುರಿಯನ್ನು ತಲುಪಲು ಸಾರ್ವಜನಿಕ ಸಂಘ ಸಂಸ್ಥೆಗಳು ಸರ್ಕಾರದೊಂದಿಗೆ ಕೈ ಜೋಡಿಸಬೇಕು ಎಂದು ಪ್ರಧಾನಿ ವಾಜಪೇಯಿ ಮನವಿ ಮಾಡಿದ್ದಾರೆ.
ಅಂತರರಾಷ್ಟ್ರೀಯ ಕೃಷ್ಣ ಪ್ರಜ್ಞೆ ಸಮಾಜ ಕೇಂದ್ರ(ಇಸ್ಕಾನ್) ರೂಪಿಸಿರುವ, 40 ಶಾಲೆಗಳ ಸುಮಾರು 30 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಆಹಾರ ಒದಗಿಸುವ ಅಕ್ಷಯಪಾತ್ರೆ ಯೋಜನೆಗೆ ಶುಭ ಹಾರೈಸಿ ವಾಜಪೇಯಿ ಕಳುಹಿಸಿರುವ ಸಂದೇಶದಲ್ಲಿ ಈ ಮನವಿ ಮಾಡಲಾಗಿದೆ. ಶನಿವಾರ ನಡೆದ ಯೋಜನೆಯ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ಅವರ ಸಂದೇಶವನ್ನು ಇಸ್ಕಾನ್‌ನ ಅಧ್ಯಕ್ಷ ಮಧು ಪಂಡಿತ್ ದಾಸ ಓದಿದರು.
ಹಸಿವಿನ ನಿರ್ಮೂಲನೆ ದೇಶ ಎದುರಿಸುತ್ತಿರುವ ಪ್ರಮುಖ ಸವಾಲುಗಳಲ್ಲಿ ಒಂದಾಗಿದೆ. ಈಚಿನ ವರ್ಷಗಳಲ್ಲಿ ಆಹಾರದ ಉತ್ಪಾದನೆ ಹೆಚ್ಚಾಗಿದ್ದರೂ, ಹಸಿವಿನ ಸಮಸ್ಯೆ ನಿವಾರಣೆಯಾಗಿಲ್ಲ ಎಂದು ವಿಷಾದಿಸಿರುವ ಪ್ರಧಾನಿ, ಹಸಿವಿನ ನಿರ್ಮೂಲನೆ ಕೇವಲ ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ , ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಸರ್ಕಾರದೊಂದಿಗೆ ಕೈ ಜೋಡಿಸಬೇಕು ಎಂದು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಪೌಷ್ಟಿಕ ಆಹಾರದ ಕೊರತೆಯಿಂದ ಬಡ ಕುಟುಂಬಗಳ ಮಕ್ಕಳು ಬಳಲುತ್ತಿವೆ. ಶಾಲೆಗಳಲ್ಲಿ ಹಾಜರಾತಿಯ ಪ್ರಮಾಣ ಕುಸಿಯಲು ಆಹಾರದ ಕೊರತೆ ಕೂಡ ಕಾರಣವಾಗಿದೆ. ಇದು ವೈಯಕ್ತಿಕ ನಷ್ಟ ಎಂದು ಭಾವಿಸಲಾಗದು. ಬದಲಿಗೆ ಇದು ದೇಶಕ್ಕಾದ ಹಾಗೂ ಮಾನವೀಯತೆಗಾದ ಸೋಲು ಎಂದು ಪ್ರಧಾನಿ ಬಣ್ಣಿಸಿದ್ದಾರೆ.
ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಇತರ ಸಂಸ್ಥೆಗಳಿಗೆ, ಪ್ರಸ್ತುತ ಇಸ್ಕಾನ್ ಹಮ್ಮಿಕೊಂಡಿರುವ ಅಕ್ಷಯಪಾತ್ರೆ ಕಾರ್ಯಕ್ರಮ ಸ್ಫೂರ್ತಿಯಾಗಲಿ ಎಂದು ವಾಜಪೇಯಿ ಆಶಿಸಿದ್ದಾರೆ. ಕೇಂದ್ರ ಮಾನವ ಸಂಪನ್ಮೂಲ ಸಚಿವ ಮುರಳಿ ಮನೋಹರ ಜೋಶಿ ಕಾರ್ಯಕ್ರಮದಲ್ಲಿ ಹಾಜರಿದ್ದರು.
(ಯುಎನ್‌ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications