ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನ ರಜೆ
ಬೆಂಗಳೂರು : ಅಭಿಮಾನಿಗಳು ವರನಟ ಡಾ. ರಾಜ್‌ಕುಮಾರ್ ಅವರ ಬಿಡುಗಡೆಯ ವಿಜಯೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ರಾಜ್ಯದ ಎಲ್ಲ ಶಾಲೆ - ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಈ ನಡುವೆ ಕೊಯಮತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್, ಗುರುವಾರ ಬೆಳಿಗ್ಗೆ ಕರ್ನಾಟಕ ಸರ್ಕಾರ ಕಳುಹಿಸುವ ವಿಶೇಷ ಹೆಲಿಕ್ಯಾಪ್ಟರ್‌ನಲ್ಲಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.
109 ದಿನಗಳ ನಂತರ ರಾಜ್‌ಕುಮಾರ್ ಅವರು ಕಾಡುಗಳ್ಳನ ವಶದಿಂದ ಸುರಕ್ಷಿತವಾಗಿ ಬಿಡುಗಡೆಗೊಂಡು, ಗುರುವಾರ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಭಿಮಾನಿಗಳು ಸಂಭ್ರಮ ಆಚರಿಸುತ್ತಿದ್ದಾರೆ. ವಿಜಯೋತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ ಅವರು, ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ - ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದರು. ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಅವರು ಸದನದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು.
ಸದಾಶಿವನಗರದಲ್ಲಿ ವಿಜಯೋತ್ಸವ : ರಾಜ್ ಬಿಡುಗಡೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಬೆಳಗ್ಗಿನಿಂದಲೇ ಸದಾಶಿವನಗರದಲ್ಲಿರುವ ಡಾ. ರಾಜ್‌ಕುಮಾರ್ ಅವರ ಮನೆಯ ಮುಂದೆ ಸೇರಿರುವ ಸಾವಿರಾರು ಅಭಿಮಾನಿಗಳು ಸಂಜೆ 7 ಗಂಟೆಯಾದರೂ ಅಲ್ಲೇ ಬೀಡು ಬಿಟ್ಟಿದ್ದರು. ರಾಜ್‌ಕುಮಾರ್ ಗುರುವಾರ ಬರುತ್ತಾರೆ ಎಂದು ಹೇಳುತ್ತಿದ್ದರೂ, ಅಭಿಮಾನಿಗಳಿಗೆ ರಾಜ್‌ರನ್ನು ಇಂದೇ ಕಾಣುವ ತವಕ.
ಪಟಾಕಿಗಳನ್ನು ಸಿಡಿಸಿ, ಡೊಳ್ಳು ಬಾರಿಸುತ್ತಾ, ಕೇಕೆ ಹಾಕಿ, ಸಿಹಿ ಹಂಚಿ, ಜಯಕಾರ ಹಾಕುತ್ತಾ ಅಭಿಮಾನಿಗಳು ವಿಜಯೋತ್ಸವ ಆಚರಿಸುತ್ತಿದ್ದರು. ಈ ಮಧ್ಯೆ ರಾಜ್ ಕುಟುಂಬದವರು ತಮಿಳುನಾಡಿಗೆ ತೆರಳಿದ್ದಾರೆ.
ಸರ್ವತ್ರ ಸಂತಸ : ಕರ್ನಾಟಕ ರತ್ನ ಡಾ. ರಾಜ್‌ಕುಮಾರ್ ಅವರ ಸುರಕ್ಷಿತ ಬಿಡುಗಡೆಯ ಸುದ್ದಿಯಿಂದ ನಾಡೇ ಸಂತಸದಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ತಿಳಿಸಿದ್ದಾರೆ. ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಟಿ.ಎನ್. ನರಸಿಂಹಮೂರ್ತಿ, ಪಿ.ಜಿ.ಆರ್. ಸಿಂಧ್ಯಾ, ಜಗದೀಶ ಶೆಟ್ಟರ್ ಮೊದಲಾದವರು ಸಂತಸ ವ್ಯಕ್ತಪಡಿಸಿದ್ದಾರೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ರಾಜ್ ಅಪಹರಣ
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications