‘ಮುಚ್ಚಿರುವ ಹತ್ತಿ ಗಿರಣಿಗಳ ಪುನಶ್ಚೇತನಕ್ಕೆ ಕೇಂದ್ರದ 700 ಕೋಟಿ ನೆರವು’
ಮೈಸೂರು : ಮುಚ್ಚಿರುವ ಹತ್ತಿ ಗಿರಣಿಗಳ ಪುನಶ್ಚೇತನಕ್ಕೆ ದೀನ್ದಯಾಳ್ ಹೆಸರಿನಲ್ಲಿ ಕೇಂದ್ರ ಸರ್ಕಾರ ಇನ್ನು 7 ವರ್ಷಗಳ ಅವಧಿಯಲ್ಲಿ 700 ಕೋಟಿ ರುಪಾಯಿಗಳ ನೆರವನ್ನು ನೀಡಲಿದೆ ಎಂದು ಜವಳಿ ಸಚಿವ ವಿ.ಧನಂಜಯಕುಮಾರ್ ಗುರುವಾರ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಸಚಿವರು, ಹುಬ್ಬಳ್ಳಿಯ ಮಹದೇವ ಹತ್ತಿ ಗಿರಣಿ ಸೇರಿದಂತೆ ರಾಜ್ಯಾದ್ಯಂತ ಮುಚ್ಚಿರುವ ಹತ್ತಿ ಗಿರಣಿಗಳ ಪುನಶ್ಚೇತನಕ್ಕೆ ರಾಜ್ಯ ಸರ್ಕಾರವು ಕೂಡ ನೆರವು ನೀಡಬೇಕು. 2004ರ ಹೊತ್ತಿಗೆ ಮುಕ್ತ ವ್ಯಾಪಾರಕ್ಕೆ ಅವಕಾಶ ನೀಡುವಂಥ ಜವಳಿ ನೀತಿ ಜಾರಿಗೆ ಬರಲಿದ್ದು, ಅಂತರರಾಷ್ಟ್ರೀಯ ಮಾರುಕಟ್ಟೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಉತ್ತಮ ಗುಣ ಮಟ್ಟದ ಜವಳಿಯನ್ನು ಉತ್ಪಾದಿಸಬೇಕು. ಪ್ರಸ್ತುತ 4.8 ಶತಕೋಟಿ ಡಾಲರ್ ಮೌಲ್ಯದ ಜವಳಿ ರಪ್ತು ಮಾಡಲಾಗಿದ್ದು, 2010ರ ವೇಳೆಗೆ 10 ಶತಕೋಟಿ ಡಾಲರ್ ಮೌಲ್ಯದ ಜವಳಿ ರಫ್ತು ಮಾಡುವ ಗುರಿ ಇದೆ ಎಂದರು.
ಹತ್ತಿ ಉದ್ದಿಮೆಗಳ ಅಭಿವೃದ್ಧಿಗೆ ಕಾಟನ್ ಮಿಷನ್ ಎಂಬ ಕಾರ್ಯಕ್ರಮ ರೂಪಿಸಲಾಗಿದೆ. ರೇಷ್ಮೆ ಉತ್ಪನ್ನ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇದಕ್ಕಾಗಿ ವಿಶ್ವಬ್ಯಾಂಕ್ ನೆರವು ನೀಡುತ್ತಿದೆ. ವಿದೇಶೀ ಮಾರುಕಟ್ಟೆಗಳ ಅಗತ್ಯಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ನಾವು ಯೋಚಿಸಬೇಕಿದೆ. ಜವಳಿ ರಫ್ತಿನಿಂದ ಮಾಹಿತಿ ತಂತ್ರಜ್ಞಾನಕ್ಕಿಂತ ಹೆಚ್ಚಿನ ವಿದೇಶೀ ವಿನಿಮಯ ಸಾಧ್ಯವಾಗಿದೆ ಎಂದು ಹೇಳಿದರು.
(ಮೈಸೂರು ಪ್ರತಿನಿಧಿಯಿಂದ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications